ಚಿತ್ರದುರ್ಗ: ಶಾಲೆ (School) ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಈ ಬಗ್ಗೆ ಟ್ವೀಟ್ (Tweet) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು. ಇದನ್ನೂ ಓದಿ: ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿಈ ಟ್ವೀಟ್ ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆಅಂದು ನನಗೆ ಶಿಕ್ಷಣ (Education) ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ. ಇದರಿಂದ ಟ್ವೀಟ್ ಮೂಲಕ ಸಿಎಂ ಕಚೇರಿ ಗಮನ ಸೆಳೆದಿದ್ದ ಸ್ಥಳೀಯ ಮಹೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸಿಬ್ಬಂದಿಗೆ ನೂತನ ಡ್ರೆಸ್ ಕೋಡ್
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


