ಬೆಂಗಳೂರು: ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ-ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್‌ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ. ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.ಸಿಎಂ ಸಿದ್ದರಾಮಯ್ಯ, ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ದರಾಮಯ್ಯನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?
‌
ಇಂದಿನಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಅಂತ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಸರ್ಕಾರ ತನ್ನ ಮಾತಿಗೆ ಎಷ್ಟು ಗಟ್ಟಿಯಾಗಿ ನಿಲ್ಲುತ್ತದೆ ಎಂದು ನೋಡೋಣ ಎಂದರು.ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್ ಆಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಯಾರೆಷ್ಟೇ ದೊಡ್ಡವರಿದ್ರೂ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ‌ ಎಂದು ಆಗ್ರಹಿಸಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


