ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿಕೆ ಹರಿಪ್ರಸಾದ್ (BK Hariprasad) ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ.ಸದಾಶಿವನಗರ ನಿವಾಸದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಮಾತನಾಡಿದರೆ ಪಕ್ಷವನ್ನು ವಿರೋಧಿಸಿದಂತೆ: ನಂಜೇಗೌಡ ವಾಗ್ದಾಳಿಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ. ಕಾಂಗ್ರೆಸ್‌ನಲ್ಲಿ ಯಾವುದೇ ಅಂತಃಕಲಹ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಹರಿಪ್ರಸಾದ್ ವೈಯಕ್ತಿಕ ಅಸಮಾಧಾನ ಹೊರಹಾಕ್ತಿದ್ದಾರೆ, ಹೈಕಮಾಂಡ್‌ ನೋಡಿಕೊಳ್ಳುತ್ತೆ – ಸಚಿವ ಬೋಸರಾಜುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


