ಚಿಕ್ಕಬಳ್ಳಾಪುರ: ಅಕ್ರಮವಾಗಿ ರಕ್ತ ಚಂದನ (Red Sandalwood) ಸಾಗಿಸುತ್ತಿದ್ದ ಕಳ್ಳರ ಕಾರು ಭೀಕರ ಅಪಘಾತಕ್ಕೀಡಾಗಿ (Accident) ನಜ್ಜುಗುಜ್ಜಾಗಿದ್ದರೂ ಕಳ್ಳರು ಪವಾಡವೆಂಬಂತೆ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಲ್ಲಿ ನಡೆದಿದೆ.ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಕಾರು ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ರೀತಿಯಲ್ಲಿ ಗುರುತೇ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿ ಬಿದ್ದಿದೆ. ಕಾರಿನಲ್ಲಿದ್ದ ರಕ್ತಚಂದನ ಕಳ್ಳರಾದ ನಾಗರಾಜು, ನಾಗೇಂದ್ರ, ಶ್ರೀನಿವಾಸ್ ಮೂವರಿಗೂ ಗಾಯಗಳಾಗಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರೂ ಅದೃಷ್ಟವಶಾತ್ ಎಂಬಂತೆ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ 24 ರಕ್ತಚಂದನದ ತುಂಡುಗಳನ್ನು ಸೀಟಿನ ಕೆಳಭಾಗದಲ್ಲಿ ಇಟ್ಟುಕೊಂಡು ಸಾಗಿಸಲಾಗುತ್ತಿತ್ತು. ನೆರೆಯ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ರಕ್ತಚಂದನದ ತುಂಡುಗಳನ್ನ ಸಾಗಾಟ ಮಾಡಲಾಗುತ್ತಿತ್ತು. ಸದ್ಯ ರಕ್ತಚಂದನದ ತುಂಡುಗಳನ್ನ ಪೇರೇಸಂದ್ರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಸಿಪಿಐ ನಯಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


