ಬೆಂಗಳೂರು: ಮಂಗಳವಾರದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು (International Flight) ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ (Kempegowda Airport) ಟರ್ಮಿನಲ್‌ 2ನಿಂದ (Terminal-2) ಟೇಕಾಫ್‌ ಮತ್ತು ಲ್ಯಾಂಡಿಂಗ್‌ ಆಗಲಿದೆ. ಅಂತಾರಾಷ್ಟ್ರೀಯ ವಿಮಾನಗಳ ಜೊತೆ ದೇಶೀಯ ವಿಮಾನಗಳು ಸಹ ಈ ಟರ್ಮಿನಲ್‌ನಿಂದಲೇ ಕಾರ್ಯಾಚರಣೆ ನಡೆಸಲಿವೆ.ಈ ಸಂಬಂಧ ಬಿಎಲ್‌ಆರ್‌ ಏರ್‌ಪೋರ್ಟ್‌ ಟ್ವೀಟ್‌ ಮಾಡಿದ್ದು, ಸೆ.12ರ ಬೆಳಗ್ಗೆ 10:45 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಜೊತೆ ದೇಶೀಯ ಸೇವೆ ನೀಡುವ ಏರ್‌ ಏಷ್ಯಾ, ಏರ್‌ ಇಂಡಿಯಾ, ಸ್ಟಾರ್‌ ಏರ್‌, ವಿಸ್ತಾರಾ ಕಂಪನಿಗಳ ವಿಮಾನ ಕಾರ್ಯಾಚರಣೆ ಟರ್ಮಿನಲ್‌ 2 ನಿಂದ ಆಗಲಿದೆ. ಆಕಾಸಾ ಏರ್‌, ಅಲೈಯನ್ಸ್‌ ಏರ್‌, ಇಂಡಿಗೋ, ಸ್ಪೈಸ್‌ ಜೆಟ್‌ ವಿಮಾನಗಳು ಟರ್ಮಿನಲ್‌ 1 ರಲ್ಲಿ ಟೇಕಾಫ್‌, ಲ್ಯಾಂಡಿಂಗ್‌ ಆಗಲಿದೆ ಎಂದು ತಿಳಿಸಿದೆ.ನಿಗದಿ ಪ್ರಕಾರ ಆಗಸ್ಟ್‌ 31 ರಿಂದಲೇ ಟರ್ಮಿನಲ್‌ 2 ರಿಂದ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣ ಮತ್ತು ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಕೊನೆ ಕ್ಷಣದಲ್ಲಿ ವಿಮಾನ ನಿಲ್ದಾಣದ ನಿರ್ವಹಣಾ ಮಂಡಳಿ ಕಾರ್ಯಾಚರಣಾ ದಿನಾಂಕವನ್ನು ಮುಂದೂಡಿತ್ತು. ಇದನ್ನೂ ಓದಿ: ಇಂಡಿಯಾ ಪಾಕ್ ಪಂದ್ಯಕ್ಕೆ ಮಳೆ ಕಾಟ – ಅಲ್ಲಾ ನಮ್ಮನ್ನು ಕಾಪಾಡಿದ ಎಂದ ಅಖ್ತರ್ಕಳೆದ ವರ್ಷದ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸುಮಾರು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌-2 ಉದ್ಘಾಟಿಸಿದ್ದರು. ಈ ವರ್ಷದ ಜನವರಿ 15 ದಿಂದ ದೇಶೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.ಟರ್ಮಿನಲ್-2 ಅನ್ನು ಗಾರ್ಡನ್ ಟರ್ಮಿನಲ್(Garden Terminal) ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದೆ. ಬೆಂಗಳೂರನ್ನು ಭಾರತದ ʼಗಾರ್ಡನ್‌ ಸಿಟಿʼಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ. ಪ್ರಯಾಣಿಕರಿಗೆ ಉದ್ಯಾನವನದ ಅನುಭವ ನೀಡಲು ಕೃತಕ ಮರಗಿಡಗಳು, ಹಕ್ಕಿಗಳ ಕಲರವ-ಚಿಲಿಪಿಲಿ ನಾದವನ್ನು ಇಲ್ಲಿ ಕೇಳಬಹುದು. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


