ಕೋಲಾರ: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾತನಾಡಿದರೆ ಪಕ್ಷದ ವಿರುದ್ಧವೇ ಮಾತನಾಡಿದಂತೆ ಎಂದು ಮಾಲೂರು ಶಾಸಕ ನಂಜೇಗೌಡ (Nanje Gowda) ಅವರು ಬಿ.ಕೆ ಹರಿಪ್ರಸಾದ್ (B.K Hariprasad) ಹೇಳಿಕೆ ವಿಚಾರವಾಗಿ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲಾ ರೀತಿಯ ಅವಕಾಶ ಪಡೆದುಕೊಂಡಿರುವ ಹರಿಪ್ರಸಾದ್ ಅವರಿಂದ ಈ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಪಕ್ಷಕ್ಕೆ ಇದು ಶೋಭೆ ತರುವುದಿಲ್ಲ. ಇದು ಪಕ್ಷದ ವಿರೋಧಿ ನಡೆಯಾಗಿದೆ. ಇದರಿಂದ ಪಕ್ಷಕ್ಕೆ ಹಾನಿ ಆಗಲಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಈ ರೀತಿ ಮಾತಾಡೋದು ಸರಿಯಲ್ಲ: ದಿನೇಶ್ ಗುಂಡೂರಾವ್ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಕೆಲವು ನಾಯಕರು ಶಿಸ್ತಿನಿಂದ ಇದ್ದಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಿದೆ. ಇದರಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ ಶಿವಕುಮಾರ್ ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದಿದ್ದಾರೆ.ಪಕ್ಷದ ಹೆಸರು ಹೇಳಿಕೊಂಡು ನಾಯಕರಾಗಿ, ಈಗ ಅಧಿಕಾರ ಸಿಕ್ಕಿಲ್ಲ ಎಂದು ಸಿಎಂ ವಿರುದ್ಧ ಮಾತನಾಡುವುದು ಸರಿಯಲ್ಲ. ಸಾಕಷ್ಟು ಹಿರಿಯ ನಾಯಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಅಧಿಕಾರ ಸಿಗಲಿಲ್ಲ ಎಂದು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಹರಿಪ್ರಸಾದ್ ವೈಯಕ್ತಿಕ ಅಸಮಧಾನ ಹೊರಹಾಕ್ತಿದ್ದಾರೆ, ಹೈಕಮಾಂಡ್‌ ನೋಡಿಕೊಳ್ಳುತ್ತೆ – ಸಚಿವ ಬೋಸರಾಜುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


