ವಿಜಯನಗರ/ದಾವಣಗೆರೆ: ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಾರಕನಾಳು ದೊಡ್ಡ ತಾಂಡದಲ್ಲಿ ಯೋಧರೊಬ್ಬರ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.ಯೋಧ ಪಿರ್ಯಾ ನಾಯ್ಕ್ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. 20 ಲಕ್ಷ ರೂ. ಮೌಲ್ಯದ ನಗದು, ಒಡವೆ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ಮುಂದಿನ ವಾರ ಬರಗಾಲ ಘೋಷಣೆ ಮಾಡ್ತೀವಿ – ಕೇಂದ್ರದ ಸಹಾಯ ಕೇಳ್ತೀವಿ: ಸಿದ್ದರಾಮಯ್ಯತನ್ನ ಕುಟುಂಬ ಸಮೇತ ಸಹೋದರಿ ಮನೆಗೆ ಯೋಧ ಪಿರ್ಯಾ ನಾಯ್ಕ್ ತೆರಳಿದ್ದ. ಈ ವೇಳೆ ಮನೆಯಲ್ಲಿ ಪ್ರೀಜ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.ನಂತರ ವಿಷಯ ತಿಳಿದು ಹರಪ್ಪನಹಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿನ ಬಹುತೇಕ ವಸ್ತುಗಳು ಸುಟ್ಟು ಸಂಪೂರ್ಣ ಹಾನಿಯಾಗಿವೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಹೆಚ್.ಡಿ.ಕುಮಾರಸ್ವಾಮಿಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸರ್ಕಾರದಿಂದ ಪರಿಹಾರ ನೀಡುವ ಭರವಸೆಯನ್ನು ಅಧಿಕಾರಿಗಳು ಕೊಟ್ಟಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


