– ಇನ್ನೆರಡು ದಿನಗಳಲ್ಲಿ ಅಧಿಕೃತ ಘೋಷಣೆ ಸಾಧ್ಯತೆಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ (Lokasabha Election) ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ.ಇತ್ತೀಚಿಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು (HD Devegowda) ಮತ್ತು ಕೇಂದ್ರ ಸಚಿವ ಅಮಿತ್ ಶಾ (Amit Shah) ದೆಹಲಿಯಲ್ಲಿ ಸಭೆ ಸೇರಿ ಮೈತ್ರಿ ಸೂತ್ರ ಹೆಣೆದಿದ್ದಾರೆ. ಆದರೆ ಸೀಟು ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ. ಬಹುತೇಕ 24+4 ಸೀಟು ಹಂಚಿಕೆ ಸೂತ್ರವೇ ಫೈನಲ್ ಆಗುವ ಸಾಧ್ಯತೆಗಳಿವೆ. ಎಲ್ಲಾ ಸೂತ್ರಗಳಿಗೆ ಒಪ್ಪಿಗೆ ಸಿಕ್ಕಿದರೆ ಸೆಪ್ಟೆಂಬರ್ 10ಕ್ಕೆ ದೋಸ್ತಿ ಡೀಲ್ ಅಧಿಕೃತವಾಗಿ ಪ್ರಕಟವಾಗಬಹುದು ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಸೆಪ್ಟೆಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಇವತ್ತು ಬೆಂಗಳೂರಲ್ಲಿ ಮಾತಾಡಿದ ಮಾಜಿ ಸಿಎಂ ಯಡಿಯೂರಪ್ಪ (Yediyurappa) ಮೈತ್ರಿಯ ಗುಟ್ಟನ್ನು ರಟ್ಟು ಮಾಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಗೆ ಪ್ರಧಾನಿ ಮೋದಿ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ಮುಂದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೊಡ್ಡಗೌಡ್ರು ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿರೋದು ಸಂತೋಷ: ಬಿಎಸ್‌ವೈಮೈತ್ರಿ ಅಧಿಕೃತ ಆದ ಮೇಲೆ ದೇವೇಗೌಡರು ಮತ್ತು ಕುಮಾರಸ್ವಾಮಿಯನ್ನು (Kumaraswamy) ಭೇಟಿ ಮಾಡುತ್ತೇನೆ ಎಂದು ಯಡಿಯೂರಪ್ಪ ಪ್ರಕಟಿಸಿದ್ದಾರೆ. ಮೈಸೂರು ಹಾಗೂ ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸ್ತಿದೆ. ಜೆಡಿಎಸ್ ಮೈತ್ರಿ ಸೂತ್ರ ಏನು?
7+21 ಸೀಟು ಹಂಚಿಕೆ ಸೂತ್ರವನ್ನು ಜೆಡಿಎಸ್‌ ಮುಂದಿಟ್ಟಿದೆ. ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಬೇಡಿಕೆ ಇಟ್ಟಿದೆ.ಬಿಜೆಪಿ ಮೈತ್ರಿ ಸೂತ್ರ ಏನು?
24+4 ಸೀಟು ಹಂಚಿಕೆ ಸೂತ್ರವನ್ನು ಬಿಜೆಪಿ ಮಾಡಿದೆ. ಹಾಸನ, ತುಮಕೂರು, ಮಂಡ್ಯ ಬಿಟ್ಟು ಕೊಡಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಅಥವಾ ಚಿಕ್ಕಬಳ್ಳಾಪುರ ಪೈಕಿ ಒಂದು ಕ್ಷೇತ್ರ ಜೆಡಿಎಸ್‍ಗೆ ಸಿಗುವ ಸಾಧ್ಯತೆಯಿದೆ. ಕಮಲ-ತೆನೆ ಮೈತ್ರಿಗೆ ಮಂಡ್ಯ ಕಗ್ಗಂಟು
ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದ್ದು, ಕ್ಷೇತ್ರಕ್ಕೆ `ತೆನೆ’ ಬೇಡಿಕೆ ವ್ಯಕ್ತಪಡಿಸಿದೆ. ಒಂದು ವೇಳೆ ಬಿಜೆಪಿ ಒಪ್ಪಿಗೆ ನೀಡಿದರೆ ಹಾಲಿ ಎಂಪಿ ಸುಮಲತಾ ಅಂಬರೀಶ್ ಭವಿಷ್ಯವೇನು ಎಂಬ ಪ್ರಶ್ನೆ ಎದ್ದಿದೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಸುಮಲತಾ ಬೆಂಬಲ ನೀಡಿದ್ದರು. ಹೀಗಾಗಿ ಈ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಜೆಪಿ ಬಿಟ್ಟುಕೊಡುತ್ತಾ ಎಂಬ ಪ್ರಶ್ನೆ ಎದ್ದಿದೆ. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


