ಬೆಂಗಳೂರು: ನರೇಂದ್ರ ಮೋದಿ (Narendra Modi) ಅವರು ಕೇವಲ ಬಿಜೆಪಿಯ ನಾಯಕರಲ್ಲ, ಪ್ರಧಾನಿ ಹುದ್ದೆಯಲ್ಲಿ ಕುಳಿತಿರುವವರು. ಅವರ ನಡೆ-ನುಡಿ, ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕು. ಆದ್ರೆ ಮೋದಿ ಅವರು ಇನ್ನೂ RSSನ ತಮ್ಮ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿ ಕಾರಿದ್ದಾರೆ.`ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಹಾಗೂ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಭೂಮಿ ನಿರ್ನಾಮ ಹಂತ ತಲುಪಿದ್ರೆ ಮುಂದೇನು?ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನಿನ ಪ್ರಕಾರ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಅದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನ ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ, ತಪ್ಪು ಮಾಹಿತಿ ಕೊಟ್ಟವರ ವಿರುದ್ಧ ಕ್ರಮ: ಹೆಬ್ಬಾಳ್ಕರ್‌ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮ. ಆದ್ರೆ ನರೇಂದ್ರ ಮೋದಿ ಅವರು ಇನ್ನೂ ಆರ್‌ಎಸ್‌ಎಸ್‌ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ, ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ ಎಂದು ಟೀಕಿಸಿದ್ದಾರೆ.ಪ್ರಧಾನಿಯವರು ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರಿಗೆ ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿಯಾಗಿದೆ. ಮೋದಿ ಅವರ ಹಿಂದಿನ ನಡವಳಿಕೆಗಳನ್ನ ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ಧಿ ಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಕುಟುಕಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


