ಬೆಂಗಳೂರು: ಆಪರೇಷನ್ ಹಸ್ತದ (Operation Hasta) ಸದ್ದು ಜೋರಾಗಿರುವ ಹೊತ್ತಲ್ಲೇ ಚಿತ್ರದುರ್ಗದ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas) ಮನೆಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿದ್ದಾರೆ.ಕೃಷ್ಣ ಜನ್ಮಾಷ್ಟಮಿ (Krishna Janmashtami) ನೆಪದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರ ಕೆಆರ್ ಪುರಂ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ ಈ ವಿಚಾರ ಭಾರೀ ಚರ್ಚೆಯಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್‌, ನಮ್ಮದು ಆಪರೇಷನ್ ಅಲ್ಲ, ಕೋ ಅಪರೇಷನ್. ಕೃಷ್ಣ ‌ಜನ್ಮಾಷ್ಟಮಿಗೆ ಕರೆದಿದ್ದರು ಬಂದಿದ್ದೇನೆ. ಆಶೀರ್ವಾದ ಪಡೆದಿದ್ದೇನೆ, ಊಟ ಮಾಡಿದ್ದೇನೆ ಎಂದು ತಿಳಿಸಿದರು.‌ಪೂರ್ಣಿಮಾ ಶ್ರೀನಿವಾಸ್ ಪ್ರತಿಕ್ರಿಯಿಸಿ, ಇವತ್ತು ಡಿ‌ಕೆ ಶಿವಕುಮಾರ್ ಅವರು ಹಬ್ಬದ ಕಾರಣಕ್ಕೆ ಮನೆಗೆ ಬಂದು ಊಟ ಮಾಡಿ ಹೋದರು. ಕಾಂಗ್ರೆಸ್ಸಿನಿಂದ ನನಗೆ ಆಹ್ವಾನ ಇದೆ. ಆದರೆ ನಾನು ಬಿಜೆಪಿಯಲ್ಲಿ ಇದ್ದೇನೆ. ಬಿಜೆಪಿ ಬಿಡುವ ಯೋಚನೆ ಮಾಡಿಲ್ಲ ಎಂದು ಹೇಳಿದರು.ಚುನಾವಣೆಗೂ ಮುಂಚಿತವಾಗಿ ಈ ಚರ್ಚೆ ಇತ್ತು. ಆದರೆ ನಾನು ಬಿಜೆಪಿ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಲಿಲ್ಲ. ಈಗಲೂ ಕೂಡ ಯಾವುದೇ ನಿರ್ಧಾರ ಮಾಡಿಲ್ಲ. ಹೋಗುವುದಾದರೆ ಎಲ್ಲರಿಗೂ ಹೇಳಿಯೇ ಹೋಗುತ್ತೇನೆ. ಕದ್ದು ಮುಚ್ಚಿ ನಾನು ಕಾಂಗ್ರೆಸ್ ಸೇರುವುದಿಲ್ಲ. ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನನಗೆ ಯಾವುದೇ ಅಸಮಾಧಾನ ಇಲ್ಲ. ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ್ಯಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


