ದಾವಣಗೆರೆ: ಹಿರಿಯ ಬಿಜೆಪಿ (BJP) ಮುಖಂಡ ಹಾಗೂ ಮಾಜಿ ಶಾಸಕ ಟಿ.ಗುರುಸಿದ್ದನಗೌಡ (Guru Siddanagowda) ಹಾಗೂ ಅವರ ಮೂರು ಜನ ಮಕ್ಕಳನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗಳೂರು ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಇದರಿಂದಾಗಿ ಪಕ್ಷದ ಅಭ್ಯರ್ಥಿ ಎಸ್.ವಿ ರಾಮಚಂದ್ರ ಅವರ ಸೋಲಿಗೆ ಕಾರಣರಾಗಿದ್ದಾರೆ ಎನ್ನುವ ಆರೋಪ ಅವರ ಮೇಲಿತ್ತು. ಇದೇ ಕಾರಣಕ್ಕೆ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ರಾಜ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚನೆ ಮೇರೆಗೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ್ ಅವರು ಉಚ್ಛಾಟನೆ ಮಾಡಿದ್ದಾರೆ. ಇದನ್ನೂ ಓದಿ: ಕಾವೇರಿ ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆಜಗಳೂರು ಕ್ಷೇತ್ರದ ಮಾಜಿ ಶಾಸಕರಾಗಿರುವ ಗುರುಸಿದ್ದನಗೌಡ ಅವರು ಚೆಕ್ ಡ್ಯಾಂ ಗೌಡ್ರು ಎಂದೇ ಖ್ಯಾತಿ ಗಳಿಸಿದ್ದರು. ಅಲ್ಲದೇ ಜಲ್ಲೆಯಲ್ಲಿ ವಾಜಪೇಯಿ ಎಂದೇ ಹೆಸರಾಗಿದ್ದರು. ಬರುವ ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಅವರ ಮಗ ಡಾ.ಟಿ.ಜಿ. ರವಿಕುಮಾರ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಮಾಜಿ ಶಾಸಕರು ಸೇರಿದಂತೆ ಟಿ.ಜಿ ಅರವಿಂದಕುಮಾರ್, ಟಿ.ಜಿ. ರವಿಕುಮಾರ್ ಹಾಗೂ ಟಿ.ಜಿ ಪವನಕುಮಾರ್ ಈ ಮೂವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿಗೆ ಹೋಗಿ ಬಂದರೂ ಉಚ್ಛಾಟನೆ ಮಾಡಲಿಲ್ಲ. ಅಲ್ಲದೇ ಚುನಾವಣೆಯಲ್ಲಿ ಪುತ್ರನನ್ನು ಪಕ್ಷೇತರವಾಗಿ ನಿಲ್ಲಿಸಿದರೂ ಉಚ್ಛಾಟನೆ ಮಾಡಿಲ್ಲ. ರವಿಕುಮಾರ್ ಅವರು ಲೋಕಸಭಾ ಚುನಾವಣೆ ಟಿಕೆಟ್‍ಗೆ ಅಡ್ಡಿ ಬರುತ್ತಾರೆ ಎಂದು ಇಡೀ ಕುಟುಂಬವನ್ನೇ ಸಂಸದ ಜಿ.ಎಂ.ಸಿದ್ದೇಶ್ವರ್ ಉಚ್ಛಾಟನೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಕುಡಿದು ಬೈಕ್ ಸವಾರನೇ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ: ಚಂದ್ರಪ್ರಭಾWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


