ತುಮಕೂರು: ಗೌರಿ-ಗಣೇಶ ಮೂರ್ತಿ (Ganesha Idol) ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸಮಯದಲ್ಲಿ ಆಯೋಜಕರು ಜಿಲ್ಲಾಧಿಕಾರಿಗಳ (Tumkur DC) ಆದೇಶದಂತೆ ಪ್ರಸಾದ ವಿತರಿಸಲು ಕಡ್ಡಾಯವಾಗಿ ಸಮಿತಿಯಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ತಿಪಟೂರು ತಾಲೂಕು ದಂಡಾಧಿಕಾರಿ ಪವನ್‌ಕುಮಾ‌ರ್ ತಿಳಿಸಿದ್ದಾರೆ.ತಾಲ್ಲೂಕು ಆಡಳಿತ ಸೌಧದಲ್ಲಿ ಗೌರಿ-ಗಣೇಶ ಮೂರ್ತಿ (Gowri Ganesha Idol) ಪ್ರತಿಷ್ಠಾಪನೆಗೆ ಸಂಬಧಿಸಿದಂತೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನೆಡಸಿ ವಿವಿಧ ಇಲಾಖೆಗಳ ವತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ನಗರ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಆಯಾ-ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಏಕ ಗವಾಕ್ಷಿ ತಂತ್ರಾಶಗಳ ಮೂಲಕ ಅನುಮತಿ ಪಡೆಯಬೇಕು ಎಂದು ದಂಡಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುಂಡರಿಂದ ವ್ಹೀಲಿಂಗ್‌ ಹುಚ್ಚಾಟ; ಬೈಕ್‌ಗಳನ್ನು ಕಿತ್ತುಕೊಂಡು ಫ್ಲೈಓವರ್‌ನಿಂದ ಎಸೆದ ಸಾರ್ವಜನಿಕರುಏನು ಆ 33 ಷರತ್ತುಗಳು?
ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಗಣೇಶ ಮೂರ್ತಿ ಪ್ರತಿಷ್ಟಾಪನೆ ಸಂದರ್ಭದಲ್ಲಿ ವಾಹನ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗದಂತೆ ಗಣೇಶ ಮಂಟಪದಲ್ಲಿ ನಿರ್ಮಿಸಬೇಕು. ಮಂಟಪದ ಹತ್ತಿರ ನೀರು, ಮರಳು ಸಂಗ್ರಹಿಸಬೇಕು. ಗಣೇಶ ಮಂಟಪದ ಹತ್ತಿರ ಬೆಳಕಿನ ವ್ಯವಸ್ಥೆ ಆಯೋಜನೆ, ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ವಿದ್ಯುತ್ ಕಂಬ, ದೂರವಾಣಿ ಕಂಬಗಳಿಗೆ ಆಳವಡಿಸದಂತೆ ಎಚ್ಚರಿಕೆ ವಹಿಸಬೇಕು. ಜನಸಂದಣಿ ನಿಯಂತ್ರಿಸಲು ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸಾಲುಗಳಿರಬೇಕು. ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಉಪಯೋಗಿಸಬೇಕು.ಡಿಜೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಅವಕಾಶ ಇರುವುದಿಲ್ಲ, ಮಂಟಪಗಳ ಹತ್ತಿರ ಆಕ್ರಮ ಮಧ್ಯ ಸೇವನೆ ಮಾಡುವುದನ್ನು ಕಡ್ಡಾಯವಾಗಿ ನಿಯಂತ್ರಿಸಲಾಗಿದೆ. ಗಣಪತಿ ಮಂಟಪದ ಹತ್ತಿರ ಪ್ರಥಮ ಚಿಕಿತ್ಸಾ ಪಟ್ಟಿಗೆ ಇಡುವುದು, ಪಿಒಪಿ ಮತ್ತು ಬಣ್ಣಲೇಪಿತ ಗಣೇಶಗಳನ್ನು ಹೊರತುಪಡಿಸಿ ಮಣ್ಣಿನಿಂದ ಮಾಡಿರುವ ಗಣಪತಿಯನ್ನು ಸ್ಥಾಪನೆಗೆ ಅವಕಾಶ ಮಾಡಿಕೊಡುವುದು. ಇದನ್ನೂ ಓದಿ: ಕಂಠಪೂರ್ತಿ ಕುಡಿದು ಕಿರಿಕ್ – ಊಟ ನೀಡದ್ದಕ್ಕೆ ಡಾಬಾ ಮಾಲೀಕನಿಗೆ ಚಾಕು ಇರಿತನಗರ ಸಭೆಯಿಂದ ಸೂಚಿಸಿರುವ ಕೆರೆಯ ಆವರಣದ ಕಲ್ಯಾಣಿಯಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಹಾಗೂ ಪಂಚಾಯಿತಿಯ ಪಿಡಿಒ ತಿಳಿಸಿರುವಂತೆ ಗಣಪತಿಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ಮಾಡಬೇಕು. ಪ್ರಸಾದ ವಿನಿಯೋಗ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಇಲಾಖೆ ವತಿಯಿಂದ ಅನುಮತಿ ಪಡೆದುಕೊಳ್ಳಬೇಕು. ಕಳೆದ ಸಾಲಿನಲ್ಲಿ 133 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ.ಸಭೆಯಲ್ಲಿ ನಗರಸಭೆ ಪೌರಯುಕ್ತ ವಿಶ್ವೇಶ್ವರಯ್ಯ ಬದರಗಡೆ, ತಾಪಂ ಇಒ ಸುದರ್ಶನ್, ನಗರ ಆರಕ್ಷಕ ಅಧಿಕಾರಿ ವೆಂಕಟೇಶ್, ಬೆಸ್ಕಾಂ ಎಇಇ ಮನೋಹರ್, ತೋಟಗಾರಿಕೆ ಅಧಿಕಾರಿ ಚಂದ್ರಶೇಖರ್, ಆರ್‌ಟಿಒ ಅಧಿಕಾರಿ ಭಗವಂತ್ ದಾಸ್, ತಾಲೂಕು ಆರೋಗ್ಯ ಅಧಿಕಾರಿ ಕೃಷ್ಣಮೂರ್ತಿ, ಅಗ್ನಿಶಾಮಕ ದಳದ ಭರತ್ ಹಾಜರಿದ್ದರು. ಇದನ್ನೂ ಓದಿ: ಜಲ ಜೀವನ್ ಮಿಷನ್‌ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡ‌ರ್ ಹಣ ಮುಟ್ಟುಗೋಲುSign in to your account
Username or Email Address


Password

 Remember Me


