ಬೆಂಗಳೂರು: ತಮಿಳುನಾಡಿಗೆ  (Tamil Nadu) ಕಾವೇರಿ ನೀರು (Cauvery Water)‌ ಹರಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.  ಇನ್ನೊಂದು ಕಡೆ ರೈತರಿಗೆ ಮನವರಿಕೆ ಮಾಡಿಕೊಡಬೇಕಾದ ಜಲಸಂಪನ್ಮೂಲ ಸಚಿವರು ರೈತ ಸಂಘಟನೆಗಳ ಪ್ರತಿಭಟನೆಯನ್ನೇ ಪ್ರಶ್ನೆ ಮಾಡುತ್ತಿದ್ದಾರೆ. ಮೇಕೆದಾಟು ಪಾದಯಾತ್ರೆ ವೇಳೆ ಎಲ್ಲಿದ್ರಿ ಎಂದು ಹೋರಾಟನಿರತ ರೈತ ಸಂಘಟನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಪ್ರಶ್ನಿಸಿದ್ದಾರೆ.ಮಂಡ್ಯದಲ್ಲಿ (Mandya) ಪ್ರತಿಭಟಿಸುತ್ತಿರುವ ರೈತ (Farmers) ಸಂಘಟನೆಗಳನ್ನು ಡಿಸಿಎಂ ಡಿಕೆಶಿ ಮತ್ತೆ ಕೆಣಕಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸಿ ಅನ್ನುತ್ತಿರುವ ರೈತ ಸಂಘಟನೆಗಳು ಮೇಕೆದಾಟು (Mekedatu) ಪಾದಯಾತ್ರೆ ವೇಳೆ ಎಲ್ಲಿ ಹೋಗಿದ್ದವು ಎಂದು ಡಿಕೆಶಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಆದರೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ? ಈಗ ಹೋರಾಟ ಮಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಕ್ಷಾಮ ತಂದಿರಿಸಿದೆ: ಬೊಮ್ಮಾಯಿ ಬಿಜೆಪಿ, ಜೆಡಿಎಸ್ ನಾಯಕರೂ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತಿಲ್ಲ. ನಮ್ಮ ರೈತರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಅದೇ ಕಾರಣಕ್ಕೆ ತಮಿಳುನಾಡಿನವರು ನಿತ್ಯ 24 ಸಾವಿರ ಕ್ಯುಸೆಕ್ ನೀರು ಕೇಳಿದ್ದರು. 3 ಸಾವಿರ ಕ್ಯುಸೆಕ್ ಮಾತ್ರ ಬಿಡಲು ಸಾಧ್ಯ ಎಂದು ನಮ್ಮ ಅಧಿಕಾರಿಗಳು ಸಮರ್ಥವಾಗಿ ವಾದ ಮಾಡಿದ್ದರ ಪರಿಣಾಮ ಈಗ ಪ್ರಾಧಿಕಾರ 5 ಸಾವಿರ ಕ್ಯುಸೆಕ್ ನೀರು ಬಿಡಲು ಅದೇಶಿಸಿದೆ ಎಂದು ಇದೇ ವೇಳೆ ಡಿಕೆಶಿ ತಿಳಿಸಿದರು.ಇತ್ತೀಚೆಗಷ್ಟೇ ಕಾವೇರಿ‌ ನೀರು ನಿಲ್ಲಿಸುವಂತೆ ಕೋರಿ ರೈತರು ಸುಪ್ರೀಂಕೋರ್ಟ್‌ಗೆ (Supreme Court) ಬೇಕಾದ್ರೆ ಹೋಗಲಿ ಅಂತ ಹೇಳುವ ಮೂಲಕ ಡಿಕೆಶಿ ರೈತರ ವಿರೋಧ ಕಟ್ಟಿಕೊಂಡಿದ್ದರು. ಈಗ ಮೇಕೆದಾಟು ಪಾದಯಾತ್ರೆ ವೇಳೆ ಎಲ್ಲಿದ್ರಿ ಅಂತ ರೈತ ಸಂಘಟನೆಗಳನ್ನು ಕೆಣಕುವ ಮೂಲಕ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಡಿಕೆಶಿ ಹೇಳಿಕೆಗಳು ರೈತ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


