ಕೋಲಾರ: ಪೋಷಕರು ಬುದ್ದಿವಾದ ಹೇಳಿದ ಹಿನ್ನೆಲೆ ಎಂಟನೇ ತರಗತಿ ವಿದ್ಯಾರ್ಥಿ (Student) ಮನೆ ಬಿಟ್ಟು ಹೋಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ಪೆದ್ದಪಲ್ಲಿ ಗ್ರಾಮದಲ್ಲಿಈ ಘಟನೆ ಜರುಗಿದ್ದು, ಗ್ರಾಮದ ಹರ್ಷಿತ್ ಎಂಬ ವಿದ್ಯಾರ್ಥಿ ಕಾಣೆಯಾಗಿದ್ದಾನೆ. ಕೆಜಿಎಫ್ ನಗರದ ಶಾಲೆಯೊಂದರಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಯಾವಾಗಲೂ ಮೊಬೈಲ್‌ನಲ್ಲಿಯೇ ಆಟವಾಡಿಕೊಂಡಿದ್ದ. ಈ ಹಿನ್ನೆಲೆ ತಂದೆ ಶೇಖರ್ ಮಗನಿಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ಮಗ ಮನೆಬಿಟ್ಟು ಹೋಗಿದ್ದಾನೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನಶುಕ್ರವಾರ ಎಂದಿನಂತೆ ಶಾಲೆಗೆ ಹೋಗಿದ್ದು, ಶಾಲೆ ಮುಗಿದ ಬಳಿಕ ಮನೆಗೆ ಬಂದಿರಲಿಲ್ಲ. ಅಲ್ಲದೇ ಶಾಲೆಯಲ್ಲಿ ತಿರುಪತಿಗೆ (Tirupati) ಹೋಗುವ ಮಾರ್ಗದ ಕುರಿತು ಸ್ನೇಹಿತರನ್ನು ವಿಚಾರಣೆ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆ ತಿರುಪತಿಗೆ ತೆರಳಿರುವ ಅನುಮಾನವನ್ನು ಪೋಷಕರು ವ್ಯಕ್ತಪಡಿಸಿದ್ದಾರೆ. ಸದ್ಯ ಪೋಷಕರು ರಾಬರ್ಟ್‌ ಸನ್ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಬಸ್‍ನಲ್ಲಿ ದಟ್ಟ ಹೊಗೆ – ಆತಂಕಕ್ಕೊಳಗಾದ ರಾಯರ ಭಕ್ತರುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


