ರಾಯಚೂರು: ಮಂತ್ರಾಲಯದಲ್ಲಿ (Mantralayam) ರಾಘವೇಂದ್ರ ಸ್ವಾಮಿಗಳ (Raghavendra Swamy) 352ನೇ ಆರಾಧನಾ ಮಹೋತ್ಸವದ (Aradhana Mahotsava) ಕೊನೆಯ ಘಟ್ಟ ಉತ್ತರಾಧನೆ ಅದ್ದೂರಿಯಾಗಿ ನಡೆಯಿತು. ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ರಾಯರ ಆರಾಧನಾ ಮಹೋತ್ಸವದ ವೈಭವದಲ್ಲಿ ಪಾಲ್ಗೊಂಡಿದ್ದರು.ಕಲಿಯುಗದ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಉತ್ತರಾಧನೆಯಾಗಿ ಆಚರಿಸಲಾಗುತ್ತದೆ. ಉತ್ತರಾಧನೆ ಹಿನ್ನೆಲೆ ನಡೆದ ಮಹಾರಥೋತ್ಸವ ರಾಯರ ಆರಾಧನೆಗೆ ಮೆರಗು ತಂದಿತು. ಈ ದಿನ ರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜ ಬೀದಿಯಲ್ಲಿ ದರ್ಶನ ಕೊಡುತ್ತಾರೆ ಎನ್ನುವ ಪ್ರತೀತಿಯಿದೆ. ಗುರುರಾಯರನ್ನು ಪ್ರಹ್ಲಾದ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯುವ ಮೂಲಕ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಮಹಾರಥೋತ್ಸಕ್ಕೂ ಮುನ್ನ ರಾಮದೇವರು ಮತ್ತು ಎಲ್ಲಾ ಮಠದ ಬೃಂದಾವನಗಳಿಗೂ ಗುಲಾಲ್ ಸಮರ್ಪಣೆ ಮಾಡುವ ಮೂಲಕ ಶ್ರೀಗಳು ವಸಂತೋತ್ಸವ ಆಚರಿಸಿದರು. ಇದನ್ನೂ ಓದಿ: ಜಿ20ಗೂ ಮುನ್ನ ಮೋದಿ – ಬೈಡೆನ್ ನಡುವೆ ದ್ವಿಪಕ್ಷೀಯ ಮಾತುಕತೆಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಿತು. ಮಹಾ ರಥೋತ್ಸವದ ಹಿನ್ನೆಲೆ ಶ್ರೀಗಳು ರಥದಲ್ಲಿ ಕುಳಿತು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.ಈ ವೇಳೆ ಚಂದ್ರಯಾನ-3 ದೇಶದ ಹೆಮ್ಮೆಯ ಕೊಡುಗೆಯಾಗಿದೆ. ಈ ಯಶಸ್ಸಿನ ಮೂಲಕ ದೇಶ ಅತ್ಯುನ್ನತ ಸ್ಥಾನಕ್ಕೆ ಏರಿದೆ. ಸೂರ್ಯಮಂಡಲಕ್ಕೂ ಇಂದು ಲಗ್ಗೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಎಲ್ಲರೂ ದೇಶಭಕ್ತಿ ಮತ್ತು ಧರ್ಮಶ್ರದ್ದೆಯನ್ನಿಟ್ಟುಕೊಳ್ಳಬೇಕು. ಭಗವಂತ ವಿಶೇಷ ಅನುಗ್ರಹ ಮಾಡಲಿದ್ದಾನೆ ಎಂದರು.ರಾಯರು ಪ್ರತಿನಿತ್ಯದಲ್ಲಿ ಅಂತರ್ಮುಖವಾಗಿ ಜಪತಪ ಮಾಡುತ್ತಿದ್ದರೆ ಉತ್ತರಾಧನೆ ದಿನ ಬಹಿರ್ಮುಖವಾಗಿ ತಮ್ಮ ದೃಷ್ಟಿಯನ್ನ ಭಕ್ತರ ಕಡೆಗೆ ಹರಿಸುತ್ತಾರೆ. ಭಕ್ತರ ಬೇಡಿಕೆ ಈಡೇರಿಸುತ್ತಾರೆ ಎನ್ನುವ ನಂಬಿಕೆಯಿದೆ. ಹೀಗಾಗಿ ಉತ್ತರಾಧನೆ ದಿನ ರಾಯರ ಅನುಗ್ರಹಕ್ಕೆ ಪಾತ್ರರಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಾಯರ ಮಠಕ್ಕೆ ಆಗಮಿಸಿ ಮಹಾರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.ಈ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಈ ವೇಳೆ ಹೆಲಿಕ್ಯಾಪ್ಟರ್ ಮೂಲಕ ಪ್ರತಿ ವರ್ಷದಂತೆ ರಥಕ್ಕೆ ಪುಷ್ಪವೃಷ್ಠಿ ಮಾಡಲಾಯಿತು. ಈ ಮೂಲಕ ರಾಯರ ಆರಾಧನೆಯ ಮುಖ್ಯ ಮೂರು ದಿನಗಳು ಇಂದಿಗೆ ಮುಕ್ತಾಯವಾದವು. ಸಪ್ತರಾತ್ರೋತ್ಸವ ಹಿನ್ನೆಲೆ ಸೆ.4ರ ವರೆಗೆ ಮಠದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮುಂದುವರೆಯುತ್ತವೆ. ಇದನ್ನೂ ಓದಿ: ರಾಮನಗರದಲ್ಲೇ ಮೆಡಿಕಲ್ ಕಾಲೇಜು ಉಳಿಯುತ್ತೆ, ವಿಪಕ್ಷಗಳು ರಾಜಕೀಯಕ್ಕೆ ಗೊಂದಲ ಮಾಡ್ತಿವೆ: ಇಕ್ಬಾಲ್ ಹುಸೇನ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


