ಯಾದಗಿರಿ: ಆಸ್ತಿ ವಿಚಾರಕ್ಕೆ ಮಲತಾಯಿಯಿಂದ 5 ತಿಂಗಳ ಹಸುಗೂಸು ಸಂಗೀತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಗುವಿನ ಶವ ಅಂತ್ಯಕ್ರಿಯೆ ಮಾಡಿದ್ದ ಸ್ಥಳದಲ್ಲಿ ಪೊಲೀಸರು ನಿಗಾವಹಿಸಿದ್ದಾರೆ.ಆಗಸ್ಟ್ 30ರಂದು ಯಾದಗಿರಿಯ ವಡಗೆಸರಾ ತಾಲೂಕಿನ ಬಬಲಾದ ಗ್ರಾಮದಲ್ಲಿ 5 ತಿಂಗಳ ಮಗು ಸಂಗೀತಾಳಿಗೆ ಮಲತಾಯಿ ದೇವಮ್ಮ ಹಾಲಿನಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದಳು. ಬಳಿಕ ಮೃತ ಮಗು ಸಂಗೀತಾಳ ತಾಯಿಯ ತವರೂರಾದ ಚಾಮನಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು. ಘಟನೆ ನಡೆದ ಎರಡು ದಿನಗಳ ಬಳಿಕ ಮಲತಾಯಿ ಕೊಲೆ ಮಾಡಿರುವ ಬಗ್ಗೆ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸನ್ನೇ ಕೊಂದ ಪಾಪಿ ಮಲತಾಯಿ?ಸದ್ಯ ಕೊಲೆ ಮಾಡಿರೋದಾಗಿ ಮಲತಾಯಿ ದೇವಮ್ಮ ತಪ್ಪೊಪ್ಪಿಕೊಂಡಿದ್ದು, ತನಿಖೆ ದೃಷ್ಟಿಯಿಂದ ಮಗುವಿನ ಶವ ಸಂಸ್ಕಾರ ಮಾಡಿದ ಸ್ಥಳದಲ್ಲಿ ಪೊಲೀಸರ ನಿಗಾವಹಿಸಲಾಗಿದೆ. ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರು ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ. ಹೀಗಾಗಿ ಮಗುವಿನ ಶವದ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


