ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ. ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಖಂಡ್ರೆ (Eshwar Khandre) ಪ್ರತಿಪಾದಿಸಿದರು.ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನೂ ಪರಿಸರ ಪ್ರವಾಸೋದ್ಯಮದ ಭಾಗ ಮಾಡಬಹುದು. ಆಗ ಇದು ಹೆಚ್ಚು ಜನರನ್ನು ಆಕರ್ಷಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಭಾನುವಾರ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ – ಲೋಕಸಭೆ ಚುನಾವಣೆ ಮೇಲೆ ಕಣ್ಣುರಿವರ್ ರಾಫ್ಟಿಂಗ್, ಚಾರಣವೇ ಮೊದಲಾದ ಪರಿಸರ ಸಂಬಂಧಿತ ಪ್ರವಾಸೋದ್ಯಮಕ್ಕೆ ಇಂದಿನ ಯುವಜನರಲ್ಲಿ ಹೆಚ್ಚಿನ ಆಸಕ್ತಿ ಇದೆ. ಹೀಗಾಗಿ ಅರಣ್ಯ ಪ್ರದೇಶದೊಳಗೆ ಇರಬಹುದಾದ ಇಂತಹ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಹೊಸ ನೀತಿ ರೂಪಿಸಲು ವರದಿ ಸಲ್ಲಿಸುವಂತೆ ತಿಳಿಸಿದರು.ಈ ಸಂಬಂಧ ಪರಿಸರ ತಜ್ಞರು, ಪ್ರವಾಸೋದ್ಯಮ ಇಲಾಖೆ ಮತ್ತಿತರ ಬಾಧ್ಯಸ್ಥರೊಂದಿಗೆ ಚರ್ಚಿಸಿ ರೂಪುರೇಷೆ ರೂಪಿಸಿ. ಕರ್ನಾಟಕದಲ್ಲಿ 300 ಕಿ.ಮೀ.ಗೂ ಹೆಚ್ಚಿನ ಕರಾವಳಿ ಇದ್ದು, ಇಲ್ಲಿಯೂ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶಗಳು ಹೆಚ್ಚಾಗಿವೆ. ಈ ಸಾಮರ್ಥ್ಯದ ಸದ್ಬಳಕೆಗೆ ಹೆಚ್ಚಿನ ಹಣಕಾಸಿನ ಹೂಡಿಕೆ ಬೇಕಾಗುತ್ತದೆ. ಬಂಡವಾಳ ಆಕರ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆಯೂ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಇದನ್ನೂ ಓದಿ: ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ – 31 ಶಿಕ್ಷಕರು ಆಯ್ಕೆಸಭೆಯಲ್ಲಿ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಹಿರಿಯ ಐಎಎಸ್ ಅಧಿಕಾರಿಗಳಾದ ಕಪಿಲ್ ಮೋಹನ್, ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ರಾಜೀವ್ ರಂಜನ್, ಸುಭಾಷ್ ಮಾಲ್ಕೆಡೆ, ಸಂಜಯ್ ಬಿಜ್ಜೂರ್, ಕುಮಾರ್ ಪುಷ್ಕರ್ ಮತ್ತಿತರರು ಪಾಲ್ಗೊಂಡಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


