ನವದೆಹಲಿ: ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಕಾಂಗ್ರೆಸ್ (Congress) ಪಕ್ಷ ಸಂಭ್ರಮಾಚರಣೆ ಮಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ (CT Ravi) ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಚಾಲನೆ ನೀಡಿರುವ ಕಾಂಗ್ರೆಸ್ ಸರ್ಕಾರ (Congress Government) ಸಂಭ್ರಮಾಚರಣೆ ಮಾಡಿದೆ. ಆದ್ರೆ ರಾಜ್ಯದ ಜನ ಸಂಭ್ರಮಿಸುವ ಸ್ಥಿತಿಯಲ್ಲಿ ಇಲ್ಲ. ರಾಜ್ಯದಲ್ಲಿ 70% ಮಳೆ ಕಡಿಮೆಯಾಗಿದೆ. ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಸಂಭ್ರಮ ಮಾಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತ ಕಾಪಾಡುವ ಕ್ರಮ ತೆಗೆದುಕೊಳ್ಳಬಹುದಿತ್ತು. ಕೇಳೋಕು ಮುಂಚೆ ತಮಿಳುನಾಡಿಗೆ ನೀರು ಬಿಟ್ಟರು. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಹಿತಕ್ಕಿಂತ ಐಎನ್‌ಡಿಐಎ ಒಕ್ಕೂಟ ಮುಖ್ಯವಾಗಿದೆ. ಅದಕ್ಕೋಸ್ಕರ ಕೇಳೋದಕ್ಕೂ ಮುಂಚೆಯೇ ನೀರು ಕೊಟ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್ ಎಂದು ರೀಲ್ಸ್ ಮಾಡಿದ್ದ ಮುಸ್ಲಿಂ ಯುವಕ, ಯುವತಿಯನ್ನ ನಿಂದಿಸಿ ವೀಡಿಯೋ ಮಾಡಿದ್ದ ಆಸಾಮಿ ಅರೆಸ್ಟ್ವಯನಾಡಿನ ಸಂಸದ ರಾಹುಲ್ ಗಾಂಧಿ ಮೈಸೂರಿಗೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದ್ರೆ ಸರ್ಕಾರದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷಗಳ ವಿರುದ್ಧ ಮಾತನಾಡಿದ್ದಾರೆ. ಗ್ಯಾರಂಟಿ ಜಾರಿ ಮಾಡಿ ರಾಜ್ಯವನ್ನು ಸಾಲದ ಸುಳಿಗೆ ತಳ್ಳುತ್ತಿದ್ದಾರೆ. ಮುಂದೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡದೇ ಇದ್ದರೆ ಕಷ್ಟವಾಗಲಿದೆ. ಬೆಲೆ ಏರಿಕೆ ಹಣದುಬ್ಬರಕ್ಕೆ ಕಾರಣವಾಗುತ್ತೆ, ಮೂಲಸೌಕರ್ಯಕ್ಕೆ ಸರ್ಕಾರ ಒತ್ತು ನೀಡುತ್ತಿಲ್ಲ, ದೂರದೃಷ್ಟಿ ಇಲ್ಲದೇ ಸರ್ಕಾರ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


