-ಸಿಎಂ ಕುರ್ಚಿಗೆ ಟವೆಲ್ ಹಾಕಿದ ನಾಯಕರುಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ನೀಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿದ್ದಾರೆ ಎಂದರು. ಇದನ್ನೂ ಓದಿ: 231 ಸಾಕ್ಷಿ ಕೇಳಿ ಜೈಲಿನಲ್ಲಿ ದರ್ಶನ್‌ ಶಾಕ್‌!ಬೆಂಗಳೂರಿನಲ್ಲಿ ಕಮಿಷನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ‍್ಯಾಂಡ್ ಬೆಂಗಳೂರಾಗಿದೆ ಎಂದು ದೂರಿದರು. ಇದನ್ನೂ ಓದಿ: ಹಾವೇರಿ ನಗರಸಭೆ `ಬಿಜೆಪಿ’ ತೆಕ್ಕೆಗೆ – ಬಹುಮತವಿದ್ದರೂ ಕಾಂಗ್ರೆಸ್‌ಗೆ ಭಾರೀ ಮುಖಭಂಗಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಅಶೋಕ್ ಆಗ್ರಹಿಸಿದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ: ಕೆಇಎಕಾಂಗ್ರೆಸ್ ಬಂದ ಬಳಿಕ ಅತ್ಯಾಚಾರ, ಮಹಿಳಾ ದೌರ್ಜನ್ಯ ಹೆಚ್ಚಿದೆ. ಕಾರ್ಕಳದಲ್ಲಿ (Karkala) ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗೊಂಡಿವೆ. ಇದರ ಹಿಂದೆ ದೊಡ್ಡ ಡ್ರಗ್ಸ್ ಜಾಲವೇ ಇದೆ. ಬಿಜೆಪಿ ಸರ್ಕಾರ ಇದ್ದಾಗ ವಿಶೇಷ ಅಭಿಯಾನ ನಡೆಸಿ ಡ್ರಗ್ಸ್ ನಿಯಂತ್ರಣ ಮಾಡಲಾಗಿತ್ತು. ಈ ಸರ್ಕಾರ ಡ್ರಗ್ಸ್ ದಂಧೆಕೋರರಿಗೆ ಅನುಮತಿ ನೀಡಿದೆ. ಇದರಿಂದಾಗಿ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದರು.ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಅಂಗನವಾಡಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಿಲ್ಲ. ಆದರೆ ರೀಲ್ಸ್ ಮಾಡಲು 60-70 ಕೋಟಿ ರೂ. ನೀಡುತ್ತಿದ್ದಾರೆ. ಅದೇ ಹಣದಲ್ಲಿ ಶಾಲೆಗಳ ದುರಸ್ತಿ ಮಾಡಬಹುದಿತ್ತು ಕಿಡಿಕಾರಿದರು. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು






 Advertisement 




Sign in to your account
Username or Email Address


Password

 Remember Me


