ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ (Mega Textile Park) ಸ್ಥಾಪಿಸಲಾಗುತ್ತಿದ್ದು, ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.ಕಲಬುರಗಿ (Kalaburagi) ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧ ಚರ್ಚಿಸಲಾಯಿತು. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಹಾಲಿನ ಖರೀದಿಯಲ್ಲಿ 1.50 ರೂ. ಕಡಿತ – ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿಪಾರ್ಕ್ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂಎಲ್‌ಡಿ ನೀರಿನ ಅವಶ್ಯಕತೆಯಿದ್ದು, ಮದ್ರಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚಿಸಿ ಪಾರ್ಕ್ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯ್ಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆ ಮಾಡಲು ಸೂಚಿಸಿದರು. ಇದನ್ನೂ ಓದಿ: ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆಜವಳಿ ಪಾರ್ಕ್ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಸೂಚಿಸಿದರು. ಜವಳಿ ಪಾರ್ಕ್ ಆವರಣದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಮಿತವ್ಯಯ ಮಾಡಲು ಸಲಹೆ ನೀಡಿದರು. ಉಳಿದಂತೆ ಜವಳಿ ಪಾರ್ಕ್‌ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ ಸಂಬಂಧ 220 ಕೆವಿ ಪವರ್ ಸಬ್‌ಸ್ಟೇಷನ್ ನಿರ್ಮಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು. ಇದನ್ನೂ ಓದಿ: IC 814: The Kandahar Hijack : ಮುಸ್ಲಿಂ ಬದಲು ಹಿಂದೂಗಳ ಹೆಸರು | ಕೇಂದ್ರದ ಕ್ಲಾಸ್‌, ಅಪಹರಣಕಾರರ ನಿಜವಾದ ಹೆಸರು ಹಾಕಲು ಒಪ್ಪಿಕೊಂಡ ನೆಟ್‌ಫ್ಲಿಕ್ಸ್‌ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ (ಜವಳಿ) ವಿಪುಲ್ ಬನ್ಸಾಲ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ:  ನೀವು ಬಸ್ಸು, ಟ್ರಕ್, ವ್ಯಾನ್ ಚಾಲಕರಾಗಬೇಕೇ? – ಇಲ್ಲಿದೆ ಸುವರ್ಣಾವಕಾಶ, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ






 Advertisement 




Sign in to your account
Username or Email Address


Password

 Remember Me


