ರಾಮನಗರ: ವರಿಷ್ಠರ ಭೇಟಿ ಬಳಿಕ ಪಕ್ಷ ನನ್ನ ಜೊತೆ ಇದೆ, ಪಕ್ಷದ ವರಿಷ್ಠರು ಜೊತೆಗಿದ್ದಾರೆ ಎಂದು ಎನಿಸಿದೆ. ಟಿಕೆಟ್ ಸಿಗಲಿ, ಸಿಗದೇ ಇರಲಿ ನಾನು ಪಕ್ಷದ ಜೊತೆ ಇರುತ್ತೇನೆ ಎಂದು ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.ಚನ್ನಪಟ್ಟಣ (Channapatna) ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಮುಖಂಡರ ಜೊತೆ ರಾಷ್ಟ್ರೀಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಹಾಗೂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಚುನಾವಣೆ ಪ್ರಕಟವಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತದೆ. ನಮ್ಮ ಹೈಕಮಾಂಡ್ ನಾಯಕರು ಹಲವು ಸಲಹೆ, ಸೂಚನೆ ನೀಡಿದ್ದಾರೆ. ಎರಡೂ ಪಕ್ಷದ ಮುಖಂಡರು ಒಟ್ಟಾಗಿ ಚುನಾವಣೆಗೆ ಹೋಗಬೇಕು. ಹಾಗಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು ಎಂದರು. ಇದನ್ನೂ ಓದಿ: Paris Paralympics | ಡಿಸ್ಕಸ್ ಥ್ರೋನಲ್ಲಿ ಭಾರತದ ಯೋಗೇಶ್‌ ಕಥುನಿಯಾಗೆ ಬೆಳ್ಳಿಕ್ಷೇತ್ರದ ವಿದ್ಯಮಾನದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದೇನೆ. ಕಾಂಗ್ರೆಸ್ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತವಾಗಿರುವ ಬಗ್ಗೆಯೂ ದೆಹಲಿ ಪ್ರವಾಸದಲ್ಲಿ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದೇನೆ. ನಾನು ಇಲ್ಲಿ ಆತುರ ಪಡುವ ಅವಶ್ಯಕತೆ ಇಲ್ಲ. ಯಾರೇ ಅಭ್ಯರ್ಥಿ ಆಗಲಿ, ಬೇಗ ತೀರ್ಮಾನ ಆದರೆ ಒಳ್ಳೆಯದು. ಇದು ಉಪಚುನಾವಣೆ ಆಗಿರುವುದರಿಂದ ಇಡೀ ಸರ್ಕಾರ ಚುನಾವಣೆ ಮಾಡುತ್ತದೆ. ಚುನಾವಣೆಯಲ್ಲಿ ಪರೋಕ್ಷವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ನಾವು ಹೋರಾಡಬೇಕಿದೆ. ಎರಡೂ ಪಕ್ಷದ ಹಿರಿಯರು ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವುನೀನು ಆತುರ ಪಡಬೇಡ ಎಂದು ಪಕ್ಷ ಹೇಳಿದೆ. ಹಾಗಾಗಿ ಪಕ್ಷದ ಆದೇಶ ಮೀರಿ ಹೋಗಬಾರದು ಎಂದು ಎನಿಸಿದೆ. ಅತಂತ್ರವಾದ ಕಾಂಗ್ರೆಸ್ ಸರ್ಕಾರ ಏನು ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಸರ್ಕಾರ ಇರುತ್ತಾ, ಇರಲ್ವಾ ಎಂದು ಗೊತ್ತಿಲ್ಲ. ಸರ್ಕಾರ ಹಗರಣಗಳಲ್ಲಿ ನಲುಗುತ್ತಿದೆ. ಈ ಸಂದರ್ಭದಲ್ಲಿ ಈ ಚುನಾವಣೆ ಗೆಲ್ಲಬೇಕು ಎನ್ನುವ ಹಠ ಮೈತ್ರಿ ಪಕ್ಷದಲ್ಲಿದೆ. ಹಾಗಾಗಿ ಎರಡೂ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!ಇನ್ನೂ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೆ ಸಿಪಿವೈ ಮುಂದಿನ ನಡೆ ವಿಚಾರದ ಕುರಿತು ಮಾತನಾಡಿದ ಅವರು, ನಾನು ಪಕ್ಷದ ಜೊತೆ ನಿಲ್ಲಬೇಕು ಎಂದು ತೀರ್ಮಾನ ಮಾಡಿದ್ದೇನೆ. ನಾನು ಸ್ಪರ್ಧೆ ಮಾಡಬೇಕು ಅನ್ನೋದು ಕಾರ್ಯಕರ್ತರ ಒತ್ತಾಯ. ಇಷ್ಟು ವರ್ಷ ಪಕ್ಷದ ಜೊತೆ ಕೆಲಸ ಮಾಡಿದ್ದೇನೆ. ಸಾಕಷ್ಟು ಏಳು-ಬೀಳು ಕಂಡಿದ್ದೇನೆ. ಹಾಗಾಗಿ ಪಕ್ಷದ ಜೊತೆ ಹೋಗೋದು ಒಳ್ಳೆಯದು ಎಂಬುದು ಹಿತೈಷಿಗಳ ಭಾವನೆ. ಕುಮಾರಸ್ವಾಮಿ ಅವರೇ ಜೆಡಿಎಸ್‌ಗೆ ಟಿಕೆಟ್ ತೆಗೆದುಕೊಂಡರೆ ನಾನು ಕೆಲಸ ಮಾಡುತ್ತೇನೆ. ನಾನು ಹಾಗೂ ನಮ್ಮ ಕಾರ್ಯಕರ್ತರು ಅವರ ಪರವಾಗಿ ಕೆಲಸ ಮಾಡುತ್ತೇವೆ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ. ಮುಂದೆ ಅವಕಾಶ ಬರುತ್ತಿರುತ್ತದೆ, ಕಾದು ನೋಡೊಣ ಎಂದರು. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು






 Advertisement 




Sign in to your account
Username or Email Address


Password

 Remember Me


