ಬೆಂಗಳೂರು: ಸೆ.17 ರಂದು ಕಲ್ಯಾಣ ಕರ್ನಾಟಕ (Kalyana Karnataka) ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದರು.ಬೆಂಗಳೂರಿನ ವಿಕಾಸಸೌಧದಲ್ಲಿ ಸಚಿವರು, ಜನಪ್ರತಿನಿಧಿಗಳೊಂದಿಗೆ ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಸಭೆಯಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾದ 371 ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಸಂದ ಸಂದರ್ಭದಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವುದರಿಂದ ಈ ಬಾರಿಯ ಉತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆಯೂ ಹೇಳಿದರು. ಇದನ್ನೂ ಓದಿ: ಬಿಲ್‌ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದಲ್ಲಿ, ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತ: ಬೆಸ್ಕಾಂಸೆ.17 ರಂದು ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ಸಚಿವರು, ಸ್ಥಳೀಯ ಪಾರಂಪರಿಕ ಜಾನಪದ ಕಲೆಗಳೊಂದಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ಒಟ್ಟುಗೂಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್‌ಸಿಂಗ್‌ ಮಾತನಾಡಿ, 371 ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಪೂರ್ಣಗೊಂಡಿದೆ. ಒಂದು ದಶಕದ ಅವಧಿಯಲ್ಲಿ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಣುತ್ತಿದ್ದೇವೆ. ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಪ್ರಮುಖ ಕಾರಣಕರ್ತರಾಗಿದ್ದು, ಅವರನ್ನು ಉತ್ಸವದ ಸಂದರ್ಭದಲ್ಲಿ ಅದ್ದೂರಿಯಾಗಿ ಸನ್ಮಾನ ಮಾಡಬೇಕೆಂದು ಹೇಳಿದರು. ಇದನ್ನೂ ಓದಿ: ಸಚಿವರ ಜೊತೆ ಕಂಪನಿಯ ನಿಯೋಗದ ಭೇಟಿ; ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ 250 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಿ.ಆರ್.ಪಾಟೀಲ್‌, ಶಾಸಕರಾದ ಎಂ.ವೈ.ಪಾಟೀಲ್, ಜಗದೇವ ಗುತ್ತೇದಾರ್‌, ಅಲ್ಲಮಪ್ರಭು ಪಾಟೀಲ್‌, ತಿಪ್ಪಣ್ಣಪ್ಪ ಕಮಕನೂರ್‌, ಖನಿಜಾ ಫಾತಿಮಾ ಭಾಗವಹಿಸಿದ್ದರು. ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜವೇಯಿ, ಜಿಲ್ಲಾಧಿಕಾರಿ ಫೌಜಿಯಾ ತನರನುಮ್‌, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಂವರ್‌ ಸಿಂಗ್‌, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸಭೆಯಲ್ಲಿ ಪಾಲ್ಗೊಂಡಿದ್ದರು.Sign in to your account
Username or Email Address


Password

 Remember Me


