ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪ ಕೋಟಿ ಒಡೆಯನಾಗಿದ್ದಾನೆ.ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ.  ಇದನ್ನೂ ಓದಿ: ರಾಜ್ಯದ ರೈತರಿಗೆ ಗಣೇಶ ಹಬ್ಬಕ್ಕೆ ಕೇಂದ್ರದಿಂದ ಗಿಫ್ಟ್‌ – ಉದ್ದು, ಸೋಯಾಬಿನ್‌ ಬೆಂಬಲ ಬೆಲೆಯಲ್ಲಿ ಖರೀದಿಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಇದನ್ನೂ ಓದಿ:ಭೀಮನ ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದರಿಂದ ಹರಕೆಯ ರೂಪದಲ್ಲಿ 1,76,29,849 ರೂ. ನಗದು, 45 ಗ್ರಾಂ ಚಿನ್ನ ಹಾಗೂ 1.300 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಇದಲ್ಲದೆ ಇ ಹುಂಡಿಯಿಂದ 2,96,469 ರೂ ನಗದು ಬಂದಿದೆ. 20 ಯುಎಸ್‌ಎ ಡಾಲರ್, ಥಾಯ್ಲ್ಯಾಂಡ್ 1, ಶ್ರೀಲಂಕಾ 2, ಅರಬ್ 3 ನೋಟು ಸೇರಿದಂತೆ ಇತರ ದೇಶಗಳ ನೋಟುಗಳು ಬಂದಿವೆ. ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ರೂ. ಮುಖಬೆಲೆಯ 11 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಯತ್ನಾಳ್ ಒಡೆತನದ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ






 Advertisement 




Sign in to your account
Username or Email Address


Password

 Remember Me


