– ಆಂಧ್ರಪ್ರದೇಶದ ಸಿಎಂಗೆ ಕೆಎಸ್‌ಟಿಡಿಸಿ ಅಧ್ಯಕ್ಷ ಬೇಡಿಕೆ
– ಭಕ್ತಾದಿಗಳಿಗೆ 350 ರೂಮ್‌ಗಳ ವ್ಯವಸ್ಥೆಅಮರಾವತಿ/ಬೆಂಗಳೂರು: ಭಾರತದ ಅತೀ ಶ್ರೀಮಂತ ದೇಗುಲಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯವೂ (Tirumala Tirupati Devasthanam) ಒಂದು. ತಿರುಪತಿ ತಿಮ್ಮಪ್ಪನಿಗೆ ಲಕ್ಷಾಂತರ ಭಕ್ತರಿದ್ದು, ತಿರುಪತಿ ಲಡ್ಡು ವಿವಾದದ (Tirupati Laddu Row) ನಂತರವೂ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದಲೂ (Karnataka) ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ (KSTDC), ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ.ತಿರುಪತಿ ಭಕ್ತರ ಪಾಲಿಗೆ ಕಲಿಯುಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಆಪತ್ತುಗಳನ್ನು ನಿವಾರಿಸುವ ಏಡುಕೊಂಡಲವಾಡ ದರ್ಶನ ಪಡೆಯಲು ಜನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಥವಾ ಕೆಎಸ್‌ಟಿಡಿಸಿಯ ಸೀಟ್‌ಗಳಿಗಾಗಿ ಪ್ರತಿದಿನ ಕಾಯುತ್ತಾರೆ. ಪ್ರತಿದಿನ ಟಿಟಿಡಿಯು ಕೆಎಸ್‌ಟಿಡಿಸಿಗೆ ಕರ್ನಾಟಕದ 250 ಭಕ್ತಾದಿಗಳಿಗೆ ನೇರ ದರ್ಶನಕ್ಕೆ ಸದ್ಯ ಅವಕಾಶ ನೀಡಿದೆ. ಆದರೂ ನೇರ ದರ್ಶನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದು ತಿರುಪತಿ ಲಡ್ಡು ವಿವಾದದ ನಂತರವೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಕೆಎಸ್‌ಟಿಡಿಸಿಯು ಪ್ರತಿದಿನ 250 ಜನರಿಗೆ ನೇರ ದರ್ಶನದ ಸಂಖ್ಯೆಯನ್ನು, ಒಂದು ಸಾವಿರಕ್ಕೆ ಹೆಚ್ಚಿಸಬೇಕೆಂದು ಆಂಧ್ರ ಸಿಎಂಗೆ ಮನವಿ ಮಾಡಿದ್ದು, ಸದ್ಯ ಮಾತುಕತೆ ನಡೆದಿದೆ. ಇದನ್ನೂ ಓದಿ: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆಇನ್ನೂ ಸದ್ಯ 250 ಜನ ಭಕ್ತಾದಿಗಳಿಗೆ ನಿಗಮದಿಂದ ಪ್ರತಿನಿತ್ಯ 5-6 ಬಸ್‌ಗಳು ರಾಜ್ಯದಿಂದ ತೆರಳುತ್ತಿದ್ದವು. ಸಾವಿರ ಜನರಿಗೆ ಅವಕಾಶ ಸಿಕ್ಕರೇ, ರಾಜ್ಯದಿಂದ ತಿರುಪತಿಯತ್ತ 10-12 ಬಸ್‌ಗಳು ಪ್ರವಾಸೋದ್ಯಮ ಇಲಾಖೆಯಿಂದ ಸಂಚರಿಸಲಿವೆ. ಭಕ್ತಾದಿಗಳ ಸಂಖ್ಯೆ ಹೆಚ್ಚಾದರೂ ಅಲ್ಲಿನ ವಸತಿ ವ್ಯವಸ್ಥೆಗೆ ಆತಂಕಪಡಬೇಕಿಲ್ಲ. ಏಕೆಂದರೆ ತಿರುಪತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 350 ರೂಮ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ






 Advertisement 




Sign in to your account
Username or Email Address


Password

 Remember Me


