ಬೆಂಗಳೂರು: ಘಟಪ್ರಭಾ ನದಿಯ (Ghataprabha River) ಪ್ರವಾಹದಿಂದಾಗಿ ಪ್ರತಿ ವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಮುಧೋಳ ತಾಲೂಕಿನ (Mudhol) ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು.ಇದನ್ನೂ ಓದಿ: ಕೊನೆಗೂ ಕಾರ್ತಿಕ್ ಮಹೇಶ್ ಮನೆಗೆ ಬಂತು ಬಿಗ್ ಬಾಸ್ ಶೋನಲ್ಲಿ ಗೆದ್ದ ಕಾರುಚರ್ಚೆಯಲ್ಲಿ ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮಾತನಾಡಿದ ರೈತರು, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಘಟಪ್ರಭಾ ನದಿಯ ಪ್ರವಾಹದಿಂದಾಗಿ ಒಟ್ಟು 3,4639 ಹೆಕ್ಟೇರ್ ಪ್ರದೇಶದಷ್ಟು ಬೆಳೆ ಹಾನಿಯಾಗಿದೆ. 2019ರಲ್ಲಿ 15,088 ಹೆಕ್ಟೇರ್, 2021ರಲ್ಲಿ 7,051 ಹೆಕ್ಟೇರ್ ಮತ್ತು 2024 ರಲ್ಲಿ 12,500 ಹೆಕ್ಟೇರ್ ಪ್ರದೇಶದಷ್ಟು ಬೆಳೆ ಹಾನಿಯಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದರು.ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದಲ್ಲಿ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ 22,500 ರೂ. ಪರಿಹಾರ ಧನ ನಿಗದಿಪಡಿಸಲಾಗಿದೆ. ಇತರ ಬೆಳೆಗಳಿಗೆ 17,000 ರೂ. ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಈಗಾಗಲೇ ಕರ್ನಾಟಕ ಕೃಷಿ ವಿಶ್ವವಿದ್ಯಾಲಯ ಕಬ್ಬು ಬೆಳೆಯನ್ನು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದೆ. ಪ್ರತಿ ಎಕರೆ ಕಬ್ಬು ಬೆಳೆಗೆ 1 ಲಕ್ಷ ರೂ. ಹಾಗೂ ಇತರ ಬೆಳೆಗಳಿಗೆ 50 ಸಾವಿರ ರೂ. ಪರಿಹಾರವನ್ನು ನೀಡಬೇಕು. ಎನ್.ಡಿ.ಆರ್.ಎಫ್ (NDRF) ಮತ್ತು ಎಸ್.ಡಿ.ಆರ್.ಎಫ್ (SDRF) ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರ ನಿಯೋಗ ಮನವಿ ಮಾಡಿದೆ.ಇದಕ್ಕೆ ಸಂಬಂಧಿಸಿದಂತೆ ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ರೈತರ ಮನವಿಗೆ ಪ್ರತಿಕ್ರಿಯಿಸಿದರು.ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಹೇಮಾ ವರದಿ: 17 ದೂರುಗಳು ದಾಖಲುಚರ್ಚೆಯಲ್ಲಿ ಅಬಕಾರಿ ಸಚಿವ ಆರ್. ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.






 Advertisement 




Sign in to your account
Username or Email Address


Password

 Remember Me


