ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ತಲುಪುವ ಸಾಧ್ಯತೆಯಿದೆ. ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21ಮಂಡ್ಯ: 28-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20ಕೋಲಾರ: 28-21
ತುಮಕೂರು: 27-20
ಉಡುಪಿ: 28-24
ಕಾರವಾರ: 26-23
ಚಿಕ್ಕಮಗಳೂರು: 24-19
ದಾವಣಗೆರೆ: 27-22ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 26-22
ಬಳ್ಳಾರಿ: 31-23
ಗದಗ: 27-23
ಕೊಪ್ಪಳ: 29-22ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-23






 Advertisement 




Sign in to your account
Username or Email Address


Password

 Remember Me


