– ʻಗೃಹಲಕ್ಷ್ಮಿʼಯರಿಗೆ ಸಿಎಂ ಭಾವನಾತ್ಮಕ ಸಂದೇಶ!ಬೆಂಗಳೂರು: ಗೃಹಲಕ್ಷ್ಮಿ (Gruhalaxmi) ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ.ಸಿಎಂ ಎಕ್ಸ್‌ನಲ್ಲಿ ಏನಿದೆ?
ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ… pic.twitter.com/Gf527sMzlW— Siddaramaiah (@siddaramaiah) August 26, 2024ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು. ಆದರೆ ಇಂದು ಬೆಳಗಾವಿ‌ ಜಿಲ್ಲೆಯ ರಾಯಬಾಗ (Raibag) ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ, ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ ಎಂದು ಅವರು ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ.ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ. ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ.ಹೀಗಿದ್ದರೂ ಅಕ್ಕಾತಾಯಿ ಲಂಗೂಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ. “ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ. ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದಾಗಿದೆ. ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ.ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಕ್ಕಾತಾಯಿ ಲಂಗೂಟಿ ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದರು. ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2,000 ಹಣ ನೀಡುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದರು. ಇದನ್ನೂ ಓದಿ: ರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮಾನುಸಾರ ಸಿಎ ನಿವೇಶನ – ಎಂ.ಬಿ ಪಾಟೀಲ್Sign in to your account
Username or Email Address


Password

 Remember Me


