ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ಪಾಂಡವಪುರ ಉಪವಿಭಾಗದ ಉಪವಿಭಾಗಾಧಿಕಾರಿ (Pandavapura AC) ಎಲ್.ಎಂ.ನಂದೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.ಫೆ.28 ರಂದು ಮೈಸೂರು ಉಪವಿಭಾಗದ ಪ್ರಭಾರ ಉಪವಿಭಾಗಧಿಕಾರಿಯಾಗಿ ಎಲ್.ಎಂ.ನಂದೀಶ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಎದುರುದಾರರಿಗೆ ವಿಚಾರಣೆಗೆ ಅವಕಾಶ ಕಲ್ಪಿಸದೆ, ಅವರಿಂದ ದಾಖಲೆಗಳನ್ನು ಪಡೆದುಕೊಳ್ಳದೆ, ವಿಚಾರಣೆಗೆ ತೆಗೆದುಕೊಂಡ ದಿನದಂದೇ ಆದೇಶ ಹೊರಡಿಸಿದ್ದರು. ಜೊತೆಗೆ ಪಕ್ಷಕಾರರು ಅವರ ನಿಲುವುಗಳನ್ನು ಮಂಡಿಸಲು ಅವಕಾಶ ನೀಡದೆ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದ ಆರೋಪ ಹೊತ್ತಿದ್ದರು. ಈ ಆರೋಪಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮುಡಾ ಕೇಸ್ – ಸಿಎಂ ರಾಜೀನಾಮೆ ಪ್ರಮೇಯವೆ ಇಲ್ಲ ಮಂಕಾಳ ವೈದ್ಯಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಇತ್ಯಾರ್ಥಪಡಿಸಿ, ಅಪ್‌ಲೋಡ್ ಮಾಡಲಾಗಿರುವ 46ರ ಪೈಕಿ ಕೆಲವು ಪ್ರಕರಣಗಳು ಸರ್ಕಾರದ ಹಿತಾಸಕ್ತಿಗೆ ಒಳಪಟ್ಟಿರುವುದನ್ನು ಗಮನಿಸಿದ್ದರೂ, ದಾಖಲೆಗಳನ್ನು ಮಂಡಿಸಲು ತಹಸೀಲ್ದಾರ್ ಅವರಿಗೆ ಅವಕಾಶ ನೀಡದೇ ಆದೇಶ ಹೊರಡಿಸಲಾಗಿದೆ. ಒಟ್ಟು 46 ಪ್ರಕರಣಗಳಲ್ಲಿ ತಹಸೀಲ್ದಾರ್ ಅವರು ಪ್ರತೇಕ ವರದಿ ಸಲ್ಲಿಸಿದ್ದರೂ, ಅದನ್ನು ಪರಿಶೀಲಿಸಿಲ್ಲ. ಜೊತೆಗೆ ಇದರಲ್ಲಿ ಕೆಲವು ಪ್ರಕರಣಗಳು ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದ್ದಾಗಿದ್ದು, ಈ ಪ್ರಕರಣದ ವಿರುದ್ಧ ವ್ಯತಿರಿಕ್ತ ಆದೇಶ ಹೊರಡಿಸಲಾಗಿದೆ ಎಂಬ ಆರೋಪಗಳನ್ನು ಆದೇಶ ಪತ್ರದಲ್ಲಿ ವಿವರಿಸಲಾಗಿದೆ.40 ಪ್ರಕರಣಗಳಿಗೆ ನೋಟಿಸ್ ನೀಡದೆ ಆದೇಶಿಸಿರುವುದು, ಒಂದೇ ವಿಚಾರಣೆಯಲ್ಲಿ ಪಕ್ಷಕಾರರಿಗೆ ನೋಟಿಸ್ ಜಾರಿ ಮಾಡದೇ ಆದೇಶಕ್ಕೆ ಕಾಯ್ದಿರಿಸಿಕೊಂಡ 37 ಪ್ರಕರಣಗಳು, ಮೇಲ್ಮನವಿ(ಅಫೀಲು) ಸ್ವೀಕೃತವಾದ ಒಂದೇ ದಿನದಲ್ಲಿ 6 ಪ್ರಕರಣಗಳನ್ನು ಇತ್ಯಾರ್ಥಪಡಿಸಿರುವುದು, ಆರ್‌ಸಿಸಿಎಂಎಸ್ ತಂತ್ರಾಂಶದಲ್ಲಿ ಅಳವಡಿಸದೇ ವಿಚಾರಣೆ ನಡೆಸಿ 1 ಪ್ರಕರಣಕ್ಕೆ ಆದೇಶ ನೀಡಿರುವುದು, ಸರ್ಕಾರದ ಹಿತಾಸಕ್ತಿ ಇರುವ 10 ಪ್ರಕರಣಗಳಲ್ಲಿ ತಹಸೀಲ್ದಾರ್ ಅವರಿಂದ ದಾಖಲೆ, ಮಾಹಿತಿ ಪಡೆಯದೆ ಆದೇಶ ನೀಡಲಾಗಿದೆ ಎಂಬ ಆರೋಪಗಳನ್ನು ಆದೇಶದಲ್ಲಿ ಪಟ್ಟಿ ಮಾಡಲಾಗಿದೆ. ಇದನ್ನೂ ಓದಿ: ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರಿನ್ಸಿಪಾಲ್ ಸೇರಿ 7 ಮಂದಿ ಅರೆಸ್ಟ್ಗಂಭೀರ ಸ್ವರೂಪದ ಕರ್ತವ್ಯಲೋಪ ಎಸಗಿರುವ ಆರೋಪಗಳು ಕಂಡುಬಂದಿರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.Sign in to your account
Username or Email Address


Password

 Remember Me


