ರಾಯಚೂರು: ಶ್ರೀಗುರು ರಾಘವೇಂದ್ರ ಸ್ವಾಮಿಗಳ (Raghavendra Swamy Aradhana Mahotsava) 353ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ (Mantralaya) ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ನಡೆಯುತ್ತಿವೆ. ಆರಾಧನಾ ವೈಭವವನ್ನು ಭಕ್ತರು ಕಣ್ಮನಗಳಲ್ಲಿ ತುಂಬಿಕೊಳ್ಳುತ್ತಿದ್ದಾರೆ.ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ತಮಿಳುನಾಡಿನ ಶ್ರೀರಂಗಂನ ರಂಗನಾಥ ಸ್ವಾಮಿ ದೇವಾಲಯದಿಂದ ಬಂದ ಶೇಷವಸ್ತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಿ ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಯಿತು. ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಈ ಹಿನ್ನೆಲೆ ಪ್ರತಿ ವರ್ಷ ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ನಡೆಯುತ್ತಿವೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯುತ್ತಿವೆ. ಇದನ್ನೂ ಓದಿ: ಸರ್ಕಾರಿ ಶಾಲೆಯಿಂದ ಹಾಲಿನ ಪುಡಿ ಮನೆಗೆ – ಮೈಸೂರಿನಲ್ಲಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದಿನಿಂದ ಮೂರು ದಿನಗಳು ಅತಿ ಮಹತ್ವವಾಗಿವೆ. ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು, ಭಜನಾ ಮಂಡಳಿಗಳು ಆಗಮಿಸಿ ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸುತ್ತಿದ್ದಾರೆ. ಇದನ್ನೂ ಓದಿ: ಮನೆಯೂಟ ಕೋರಿ ದರ್ಶನ್‌ ಮನವಿ – ಸೆ.5ರವರೆಗೆ ಜೈಲೂಟವೇ ಗತಿಪೂರ್ವಾಧನೆ ಹಿನ್ನೆಲೆ ಸಂಜೆ ವೇಳೆ ಮಠದ ಪ್ರಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಮಹನೀಯರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತದೆ. ಇದನ್ನೂ ಓದಿ: Kolkata Doctor Rape-Murder| ಶವ ಹಸ್ತಾಂತರ ಮಾಡಿದ 3 ಗಂಟೆಗಳ ಬಳಿಕ ಎಫ್‍ಐಆರ್ ದಾಖಲಾಗಿದ್ದು ಯಾಕೆ – ಸುಪ್ರೀಂ ಚಾಟಿ






 Advertisement 




Sign in to your account
Username or Email Address


Password

 Remember Me


