ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ (Mudigere) ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬವನ ಜೊತೆ ಸುಭಿಕ್ಷಾಳನ್ನು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗುಂಡು ಮಗು ಸಹ ಇದೆ. ಮಹಿಳೆಯ ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.ಸೋಮವಾರ ಸಂಜೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನು ಕೆಳಗಿಳಿಸದೆ ಪೊಲೀಸರು ಕಾಯುತ್ತಿದ್ದಾರೆ. ಮದುವೆಯಾಗಿ 7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದರೆ ತಹಶೀಲ್ದಾರ್ ಸ್ಥಳ ಮಹಜರು ಮಾಡಿದ ಬಳಿಕ ಶವ ಕೆಳಗಿಳಿಸಬೇಕು ಎಂಬ ನಿಯಮವಿದೆ. ಇದೇ ಕಾರಣಕ್ಕೆ ತಹಶೀಲ್ದಾರ್ ಬಂದ ಬಳಿಕ ಪೊಲೀಸರು ಶವ ಕೆಳಗಿಳಿಸಿ ಪರಿಶೀಲನೆ ನಡೆಸಲಿದ್ದಾರೆ.ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


