ಬೆಂಗಳೂರು: ಯಡಿಯೂರಪ್ಪ (Yediyurappa) ವಿರುದ್ದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ (H. R. Bhardwaj) ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಾಗ ಯಡಿಯೂರಪ್ಪ (Yediyurappa) ರಾಜೀನಾಮೆ ಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅಂತ ಆಗ್ರಹ ಮಾಡಿದ್ದ ವಿಪಕ್ಷ ನಾಯಕ ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಅಶೋಕ್ (AShok) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.ಪೋಸ್ಟ್‌ನಲ್ಲಿ ಏನಿದೆ?
ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ. ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು.ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು: ಐವನ್‌ ಡಿಸೋಜ ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅಂದು ನ್ಯಾ.ಸಂತೋಷ್ ಹೆಗ್ಡೆ (Santosh Hegde) ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಇದನ್ನೂ ಓದಿ: ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ ಆಗ್ರಹಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಢೀಕರಿಸಿದ್ದರಲ್ಲವೇ?  ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ. ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ ಅಂತ ವಿಪಕ್ಷ ನಾಯಕ ಅಶೋಕ್ ವಿರುದ್ದ ಸಿಎಂ ಕಿಡಿಕಾರಿದ್ದಾರೆ.Sign in to your account
Username or Email Address


Password

 Remember Me


