ಬೆಂಗಳೂರು: ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗುತ್ತಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ (Ivan D’Souza) ಇದೀಗ ತಮ್ಮ ಲೂಸ್ ಟಾಕ್‌ನಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.‌ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ಬಾಂಗ್ಲಾದೇಶ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಅಂತ ಕಾಂಗ್ರೆಸ್ ಶಾಸಕರೂ (Congress MLA) ಆದ ಐವಾನ್ ಡಿಸೋಜ ಹೇಳಿರೋದು ಖಂಡನೀಯ ಅಂತ ಬಿಜೆಪಿ ನಾಯಕ ಸಿ.ಟಿ ರವಿ (CT Ravi) ಆರೋಪಿಸಿದ್ದಾರೆ. ಐವಾನ್ ಡಿಸೋಜ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಸಿ.ಟಿ.ರವಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು: ಐವನ್‌ ಡಿಸೋಜಕಾಂಗ್ರೆಸ್‌ನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ‌ ಡಿಸೋಜ ಬಿಚ್ಚಿಟ್ಟಿದ್ದಾರೆ ಎಂದು ಸಿ.ಟಿ‌.ರವಿ ಅವರು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ ಆಗ್ರಹಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ (Bangladesh) ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು? ರಾಜಭವನಕ್ಕೆ ಕಾಂಗ್ರೆಸ್‌ ಪುಢಾರಿಗಳನ್ನು ನುಗ್ಗಿಸುತ್ತೀರಾ? ಎಂದು ಪ್ರಶ್ನಿಸಿರುವ ರವಿ, ಕಾಂಗ್ರೆಸ್‌ ಶಾಸಕರ ಈ ಹೇಳಿಕೆಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.ಕೂಡಲೇ ಪರಿಷತ್ ಸದಸ್ಯರಾದ ಐವಾನ್ ಡಿಸೋಜ ಅವರ ವಿರುದ್ದ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲಿಸ್ ಇಲಾಖೆಯ ಮಹಾನಿರ್ದೇಶಕರಿಗೆ ಸಿ.ಟಿ.ರವಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:  ನಾನು ಯಾವುದೇ ತಪ್ಪು ಮಾಡಿಲ್ಲ.. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ವಿಶ್ವಾಸ ಇದೆ: ಸಿದ್ದರಾಮಯ್ಯSign in to your account
Username or Email Address


Password

 Remember Me


