ಬೆಂಗಳೂರು: ಐದು ಗ್ಯಾರಂಟಿ (Congress Guarantee) ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳನ್ನು ಅಲ್ಲಗಳೆದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವ ಹಬ್ಬ – ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು.ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದರು. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪರೋಕ್ಷವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್‌ ಕೊಟ್ಟ ಸಿಎಂ, ನಾಡಿನ ಸಮಸ್ತ ಜನರು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮೂಲ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಗೌರವವಾಗಿರುತ್ತದೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಮತ್ತು ಹುತಾತ್ಮರಾದ ಅವರ ಕ್ರಾಂತಿಕಾರಿ ಸ್ನೇಹಿತರು, ನಮಗೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್, ವೈಜ್ಞಾನಿಕ ಹಾಗೂ ಜ್ಯಾತ್ಯತೀತ ತಳಹದಿಯಲ್ಲಿ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಜವಾಹರಲಾಲ್‌ ನೆಹರೂ ಮುಂತಾದ ಮಹನೀಯರನ್ನು ನಾವು ಸ್ಮರಿಸಬೇಕು ಹಾಗೂ ಅವರ ಆಶಯಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ನೆರೆಹೊರೆಯ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಇಲ್ಲಿಯೂ ಎದುರಾಗಿ ಬಿಡಬಹುದು ಎಂಬ ಎಚ್ಚರಿಕೆ ನಮ್ಮೆಲ್ಲರಲ್ಲಿ ಇರಬೇಕಾಗುತ್ತದೆ ಎಂದರು.Sign in to your account
Username or Email Address


Password

 Remember Me


