ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ (Channapatna By_election) ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧಿಸಲು ತಯಾರಿಲ್ಲ ಎಂದು ಮಾಜಿ ಸಚಿವ ಸಾರಾ ಮಹೇಶ್ (Sa Ra Mahesh) ಹೇಳಿದ್ದಾರೆ.ಮೈಸೂರಿನಲ್ಲಿ `ಪಬ್ಲಿಕ್ ಟಿವಿ’ ಜೊತೆ ಅವರು ಮಾತನಾಡಿದ್ದಾರೆ. ಈ ವೇಳೆ, ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ.ನಿಖಿಲ್ ಮೇಲೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ ಮಣಿಯುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.ಇನ್ನೂ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದಾಗಿ ಸಿ.ಪಿ ಯೋಗೇಶ್ವರ್ ಘೋಷಿಸಿಕೊಂಡಿದ್ದಾರೆ. ಪಕ್ಷ ಟಿಕೆಟ್‌ ನೀಡದಿದ್ದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ. ಇದರ ಬೆನ್ನಲ್ಲೇ ಮೈತ್ರಿ ಪಕ್ಷಗಳಲ್ಲಿ ಚರ್ಚೆಗಳು ನಡೆದಿದ್ದವು. ಈ ವಿಚಾರ ಮೈಸೂರು ಚಲೋ ಪಾದಯಾತ್ರೆ ವೇಳೆ ಸಹ ಸುದ್ದು ಮಾಡಿತ್ತು. ಈ ವೇಳೆ ನಾವು ಟಿಕೆಟ್ ಹಂಚಿಕೆಗೆ ಸೇರಿಲ್ಲ ಎಂದು ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿದ್ದರು.Sign in to your account
Username or Email Address


Password

 Remember Me


