ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate Assets Case) ಸಿಬಿಐಗೆ (CBI) ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ (High Court) ಆದೇಶವನ್ನು ಕಾಯ್ದಿರಿಸಿದೆ.ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಡಿ.ಕೆ ಶಿವಕುಮಾರ್ ಎಫ್‍ಐಆರ್ ರದ್ದಿಗೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ ಎಂದು ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ, ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಈಗ ರಾಜ್ಯ ಸರ್ಕಾರ ಒಪ್ಪಿಗೆ ಹಿಂಪಡೆದಿದೆ. ಅನುಮತಿ ಹಿಂಪಡೆದ ನಂತರ ಎಫ್‍ಐಆರ್ ಏನಾಗಲಿದೆ? ಸಿಬಿಐ ತನಿಖೆಯ ಕುರಿತ ಪ್ರಶ್ನೆ ಹೈಕೋರ್ಟ್ ಮುಂದಿದೆ ಎಂದು ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಡಿಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‍ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‍ಐಆರ್‍ನಲ್ಲಿ ಉಲ್ಲೇಖಿಸಿದೆ.2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ. ಸಿಬಿಐ ಕೂಡಾ ಒಂದು ಅರ್ಜಿ ಸಲ್ಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಅಂತ್ಯವಾಗಿದ್ದು ಆದೇಶ ಕಾಯ್ದಿರಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಸಂಕಷ್ಟ ಹೆಚ್ಚಾಗಲಿದೆ. ಸದ್ಯ ಹೈಕೋರ್ಟ್ ಆದೇಶದ ಮೇಲೆ ಡಿಕೆ ಶಿವಕುಮಾರ್ ಭವಿಷ್ಯ ನಿಂತಿದೆ.Sign in to your account
Username or Email Address


Password

 Remember Me


