ಬೆಂಗಳೂರು: ದೆಹಲಿಗೆ (Delhi) ಹೋಗಬೇಕಿದ್ದ ಗೋ ಫಸ್ಟ್ ವಿಮಾನವೊಂದು (Go First Flight) ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ (Bengaluru Airport) ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು (Passengers) ಅಲ್ಲೇ ಬಿಟ್ಟು ಟೇಕಾಫ್ ಆಗಿರುವ ಘಟನೆ ವರದಿಯಾಗಿದೆ.ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನ ಜಿ8116 ಸೋಮವಾರ ಬೆಳಗ್ಗೆ 6:30ರ ವೇಳೆಗೆ ಟೇಕಾಫ್ ಆಫ್ ಆಗಿದೆ. ಆದರೆ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ವಿಮಾನ ಟೇಕಾಫ್ ಆಗಿದೆ. ಈ ಬಗ್ಗೆ ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ವಿಮಾನಯಾನ ಸಂಸ್ಥೆ ನಿರ್ಲಕ್ಷ್ಯವಹಿಸಿದೆ ಎಂದು ಆರೋಪ ಮಾಡಿದ್ದಾರೆ.ಪ್ರಯಾಣಿಕರು ಬೋರ್ಡಿಂಗ್ ಪಾಸ್‌ಗಳನ್ನು ಹೊಂದಿದ್ದು, ಲಗೇಜ್‌ಗಳನ್ನೂ ಪರಿಶೀಲಿಸಲಾಗಿತ್ತು. ಆದರೆ ಪ್ರಯಾಣಿಕರು ವಿಮಾನದೆಡೆಗೆ ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ವಿಮಾನ ಟೇಕಾಫ್ ಆಗಿದೆ. ಇದು ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯವಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬ್ರೆಜಿಲ್‌ ಚುನಾವಣೆಯಲ್ಲಿ ಸೋಲು – ಅಧಿಕಾರಕ್ಕೆ ಸಂಸತ್‌ ಭವನಕ್ಕೆ ನುಗ್ಗಿ ದಾಂಧಲೆಕೆಲ ಪ್ರಯಾಣಿಕರು ಈ ಬಗ್ಗೆ ಟ್ವೀಟ್‌ನಲ್ಲಿ ಆರೋಪ ಹೊರಿಸಿದ್ದು, ಇದಕ್ಕೆ ವಿಮಾನಯಾನ ಸಂಸ್ಥೆ ಪ್ರತಿಕ್ರಿಯಿಸಿದೆ. ನಮ್ಮಿಂದ ಉಂಟಾಗಿರುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಪ್ರಯಾಣಿಕರಲ್ಲಿ ಕ್ಷಮೆ ಕೇಳಿದೆ. ಇದನ್ನೂ ಓದಿ: ಅತ್ತೆ ಹೆಬ್ಬಾಳ್ಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿಮಠ್
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


