ಬೆಂಗಳೂರು: ʼಸಿದ್ದು ನಿಜ ಕನಸುಗಳುʼ ಪುಸ್ತಕ ಬಿಡುಗಡೆ ಸಿಟಿ ಸಿವಿಲ್‌ ಕೋರ್ಟ್‌ (City Civil Court) ತಡೆ ನೀಡಿದೆ.ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ʼಸಿದ್ದು ನಿಜಕನಸುಗಳು ಸಂಪುಟ 1ʼ (Siddu Nija Kanasugalu) ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉನ್ನತ ಶಿಕ್ಷಣ ಸಚಿವ ಡಾ. ಸಿಎನ್‌ ಅಶ್ವತ್ಥನಾರಾಯಣ್ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟುಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್‌ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು.ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ.  ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್‌  ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


