ಬೆಂಗಳೂರು: ಸ್ಯಾಂಟ್ರೋ ರವಿಯ (Santro Ravi) ವಿರುದ್ಧ ಆತನ ಪತ್ನಿ ಮಾಡಿರುವ ಆರೋಪ ಈಗ ಪೊಲೀಸ್ ಇನ್‌ಸ್ಪೆಕ್ಟರ್‌ ಪ್ರವೀಣ್‌ಗೆ (Police inspector Praveen) ಉರುಳಾಗುವ ಸಾಧ್ಯತೆ ದಟ್ಟವಾಗಿದೆ.ಸ್ಯಾಂಟ್ರೋ ರವಿಯ ಷಡ್ಯಂತ್ರದಿಂದ ಕಾಟನ್ ಪೇಟೆ ಠಾಣೆಯಲ್ಲಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು‌ ಮೈಸೂರಿನ ವಿಜಯ ನಗರ ಠಾಣೆಯಲ್ಲಿ ಪತ್ನಿ ರಶ್ಮಿ (Rashmi) ದೂರು ನೀಡದ್ದರು. ದೂರಿನನ್ವಯ ಅಂದಿನ ಕಾಟನ್ ಪೇಟೆ ಇನ್‌ಸ್ಪೆಕ್ಟರ್‌ ಪ್ರವೀಣ್ ವಿರುದ್ಧ ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿಗೆ ಆದೇಶಿಸಲಾಗಿತ್ತು. ಸದ್ಯ ತನಿಖೆ ಪೂರ್ಣಗೊಂಡಿದ್ದು ವರದಿ ಡಿಜಿಪಿ ಪ್ರವೀಣ್ ಸೂದ್ (Praveen Sood) ಕೈ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ರಾಡಿ ಎಬ್ಬಿಸಿದ ಸ್ಯಾಂಟ್ರೋ ರವಿ ಯಾರು? ಮಂಡ್ಯ ಟು ಬೆಂಗಳೂರು ಜರ್ನಿಯ ರೋಚಕ ಕಹಾನಿದೂರಿನಲ್ಲಿ ಏನಿತ್ತು?
ಪ್ರಕಾಶ್ ಎಂಬುವವರು ನೀಡಿದ್ದ ದೂರಿನನ್ವಯ ಕಾಟನ್ ಪೇಟೆ ಠಾಣೆಯಲ್ಲಿ ನವೆಂಬರ್ 24ರಂದು ರಶ್ಮಿ, ನಯನ ಹಾಗೂ ಶೇಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೂರು ತಿಂಗಳ ಅವಧಿಗೆ ಐದು ಲಕ್ಷ ರೂ ಪಡೆದಿದ್ದ ರಶ್ಮಿ, ನವೆಂಬರ್ 23ರಂದು ಸಂಜೆ 6ಗಂಟೆಗೆ ಹಣ ಕೊಡುವುದಾಗಿ ಕಾಟನ್ ಪೇಟೆಯ ಖೋಡೆ ಸರ್ಕಲ್ ಬಳಿ ಕರೆಸಿಕೊಂಡಿದ್ದರು. ಈ ವೇಳೆ ರಶ್ಮಿಯವರ ಜೊತೆಗಿದ್ದ ಶೇಕ್ ಎಂಬುವವನು ತಮ್ಮ ಎರಡೂ ಕೈಗಳನ್ನು ಹಿಂದಿನಿಂದ ಗಟ್ಟಿಯಾಗಿ ಹಿಡಿದುಕೊಂಡಿದ್ದು, ರಶ್ಮಿ ತಮ್ಮ ಬಳಿಯಿದ್ದ ಚಾಕುವನ್ನ ಕುತ್ತಿಗೆಯ ಮೇಲಿಟ್ಟು ಬೆದರಿಸಿದ್ದಾರೆ. ಹಾಗೂ ಜೊತೆಗಿದ್ದ ನಯನ ಎಂಬಾಕೆ ತನ್ನ ಕತ್ತಿನಲ್ಲಿದ್ದ ಸುಮಾರು 13ಗ್ರಾಂ ತೂಕದ ಚಿನ್ನದ ಚೈನನ್ನು ಕಿತ್ತುಕೊಂಡು, ಪ್ಯಾಂಟ್ ಜೇಬಿನಲಿದ್ದ 9 ಸಾವಿರ ರೂಗಳನ್ನ ಕಿತ್ತುಕೊಂಡು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಇದನ್ನೂ ಓದಿ: ಐಷಾರಾಮಿ ಕಾರುಗಳ ಹೆಸರಲ್ಲಿ ಸ್ಯಾಂಟ್ರೋ ರವಿಯಿಂದ ನಡೀತಿತ್ತು ಸುಂದರಿಯರ ಸೆಲೆಕ್ಷನ್ಅಂದು ನಿಜವಾಗಿ ನಡೆದಿದ್ದು ಏನು?
ಸದ್ಯ ಇಲಾಖಾ ತನಿಖೆ ನಡೆಸಿರುವ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಕೃತ್ಯ ನಡೆದ ಸ್ಥಳದಲ್ಲಿ ರಶ್ಮಿ ಹಾಗೂ ನಯನ ಇರಲಿಲ್ಲ. ಘಟನೆ ನಡೆದ ಸ್ಥಳದಲ್ಲಿ ರಶ್ಮಿ ಹಾಗೂ ನಯನ ಇರುವಂತೆ ಸಾಬೀತು ಮಾಡಲು ಸ್ಯಾಂಟ್ರೋ ರವಿಯೇ ತನ್ನ ಕೆಲಸಗಾರ ಶೇಕ್ ಜೊತೆಯಲ್ಲಿ ರಶ್ಮಿ ಮೊಬೈಲ್ ಕೊಟ್ಟು ಕಳುಹಿಸಿದ್ದ. ನಯನ ಕೃತ್ಯ ನಡೆದ ದಿನ ಮೈಸೂರಿನಲ್ಲಿದ್ದರು. ಇಬ್ಬರೂ ಸ್ಥಳದಲ್ಲೇ ಇರಲೇ ಇಲ್ಲ. ಸೂಕ್ತ ತನಿಖೆ ನಡೆಸದೇ ಕಾಟನ್ ಪೇಟೆ ಇನ್‌ಸ್ಪೆಕ್ಟರ್‌ ಪ್ರವೀಣ್ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸ್ಯಾಂಟ್ರೋ ರವಿಯ ಷಡ್ಯಂತ್ರದ ಜೊತೆಗೆ ಕಾಟನ್ ಪೇಟೆ ಠಾಣೆಯ ಅಂದಿನ ಇನ್‌ಸ್ಪೆಕ್ಟರ್‌ ಪ್ರವೀಣ್‌ ಅವರ ಕರ್ತವ್ಯ ಲೋಪ ಎದ್ದು ಕಾಣುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿ ನೀಡಲಾಗಿದೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


