ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ (Kolara) ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.ಕಳೆದ ಬಾರಿ ಜಯಗಳಿಸಿದ್ದ ಬಾದಾಮಿ (Badami) ಪುತ್ರ ಸಿದ್ದರಾಮಯ್ಯ ಜಯಗಳಿಸಿರುವ ವರುಣ (Varuna) ಮತ್ತು ಕೋಲಾರ ಪೈಕಿ ಯಾವ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇತ್ತು. ಈಗ ಸಿದ್ದರಾಮಯ್ಯ ವರುಣಾವನ್ನು ಪುತ್ರನಿಗೆ ತ್ಯಾಗ ಮಾಡಿ ಮೊದಲ ಬಾರಿಗೆ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.ಸೋಮವಾರ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಯಾವುದೇ ಕ್ಷೇತ್ರ ಇಲ್ಲ, ಇನ್ನು ಕೂಡಾ ಕ್ಷೇತ್ರಕ್ಕಾಗಿ ಹುಡುಕಾಟ ಮಾಡುತ್ತಿರುವುದಾಗಿ ಹೇಳಿ ವ್ಯಂಗ್ಯ ಮಾಡುತ್ತಿದ್ದಾರೆ. ಆದರೆ ನನಗೆ ವರುಣಾ ಕ್ಷೇತ್ರದಲ್ಲಿ ಬೇಡಿಕೆ ಇದ್ದರೂ ಕೋಲಾರದಲ್ಲಿ ಶಾಸಕ ಶ್ರೀನಿವಾಸ್ ಗೌಡ ಕ್ಷೇತ್ರ ಬಿಟ್ಟುಕೊಡಲು ತಯಾರಿದ್ದಾರೆ. ಹೀಗಾಗಿ ನಾನು ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲೂ ಚಳಿ ಹೆಚ್ಚಳ- ಸಿಲಿಕಾನ್ ಸಿಟಿ ಜನ ಫುಲ್ ಥಂಡಾಜನರ ಆಶೀರ್ವಾದ ಇದ್ರೆ ಮಾತ್ರ ನಾವೆಲ್ಲಾ ಉಳಿಯಲು ಸಾಧ್ಯ. ಈ ಹಿಂದೆ ಕೋಲಾರಕ್ಕೆ ಬಂದು ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ ಭೇಟಿ ನೀಡಿದ್ದೆ. ಕೆಲ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿಯೂ ನೀವು ಬರಬೇಕು ಎಂದು ಒತ್ತಾಯ ಮಾಡಿದ್ದಾರೆ. ನಾನು ಚಾಮುಂಡಿ ಕ್ಷೇತ್ರದಲ್ಲಿ 5 ಬಾರಿ ಸ್ಪರ್ಧೆ ಮಾಡಿದ್ದೆ. ಬದಾಮಿ ಕ್ಷೇತ್ರದಲ್ಲೂ ಶಾಸಕನಾಗಿದ್ದೇನೆ. ಆದರೆ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


