ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜ. 12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ (Hubballi) ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು‌, 7 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.ಜ. 19ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ಎಲ್‌ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


