ಬೆಳಗಾವಿ: ಜಿಲ್ಲೆಯ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ (Gift) ಪಾಲಿಟಿಕ್ಸ್ ಆಯ್ತು ಈಗ ಪ್ರಾಮಿಸ್ (Promise) ಪಾಲಿಟಿಕ್ಸ್ ಪ್ರಾರಂಭವಾಗಿದೆ. ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಕ್ಷೇತ್ರದ ಜನರಿಗೆ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿಬಂದಿದೆ.ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ಗಂಭೀರ ಆರೋಪ ಮಾಡಿದ್ದು, ಆಣೆ ಪ್ರಮಾಣ ಮಾಡಿಸುವವರ ತರಾಟೆಗೆ ತಗೆದುಕೊಳ್ಳುವ ವೀಡಿಯೋವೊಂದನ್ನು ಧನಂಜಯ ಜಾಧವ್ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮಹಿಳೆಯರು ಮಿಕ್ಸರ್ ಗ್ರೈಂಡರ್ ಒಯ್ಯುತ್ತಿರುವ ವೀಡಿಯೋ ರಿಲೀಸ್ ಮಾಡಿದ್ದು ತೆಂಗಿನಕಾಯಿ ಹಿಡಿದು ಆಣೆ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಿಜವಾದ ಅಭಿವೃದ್ಧಿ ಮಾಡಿದ್ರೆ ಆಣೆ ಪ್ರಮಾಣ ಏಕೆ ಮಾಡಿಸ್ತಿದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಅಭಿಮಾನಿಗಳುಲಕ್ಷ್ಮೀ ಹೆಬ್ಬಾಳ್ಕರ್ ಚೇಲಾಗಳು ಪ್ರತಿ ಮನೆಗೆ ತೆರಳಿ ಆಣೆ ಮಾಡಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ವೋಟ್ ಹಾಕಬೇಕು ಅಂತಾ ಆಣೆ ಮಾಡಿಸುತ್ತಿದ್ದಾರೆ. ಈ ರೀತಿಯ ನೀಚ ರಾಜಕಾರಣ ವಿರೋಧ ಮಾಡುತ್ತಿದ್ದೇನೆ. ಇನ್ನೂರು ರೂ. ವಸ್ತು ನೀಡಿ ವೋಟ್ ಹಾಕಬೇಕೆಂದು ಆಣೆ ಮಾಡಿಸುತ್ತಿದ್ದೀರಾ? ಇಂತಹ ರಾಜಕಾರಣ ಮಾಡಬಾರದು ಎಂದು ಧನಂಜಯ ಜಾಧವ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೊಸ ಪಕ್ಷದೊಂದಿಗೆ ಫುಲ್ ಆಕ್ಟೀವ್- ಜನಾರ್ದನ ರೆಡ್ಡಿ ಓಡಾಟದಿಂದ ಬಿಜೆಪಿಗೆ ಶುರುವಾಯ್ತು ನಡುಕLive Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


