ಕಲಬುರಗಿ: ನಗರದ ಚೆಕ್ ಪೋಸ್ಟ್ ಬಳಿ ಶನಿವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯ (Firing) ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.ಬಸಯ್ಯಾ ಗುತ್ತೇದಾರ, ದಸ್ತಯ್ಯಾ ಗುತ್ತೇದಾರ, ರಾಜು, ಶಾಂತಿಬಾಯಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ನಗರದ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್ – ವದಂತಿಗಳಿಗೆ ಕಿವಿಕೊಡಬೇಡಿ: ಅಭಯ್ ಪಾಟೀಲ್ ಮನವಿಜೈ ಭವಾನಿ ಮರಾಠ ಖಾನಾವಳಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದಿತ್ತು. ಕಾಂಗ್ರೆಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಪಾಟೀಲ್ ಸಹೋದರ ಚನ್ನವೀರ ಪಾಟೀಲ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಚನ್ನವೀರ ಕೈಗೆ ಗುಂಡು ತಗುಲಿದ್ದು, ಅಬ್ಬುಬೂಕರ್ ಎಂಬವರ ಕಾಲಿಗೂ ಗುಂಡು ಹೊಕ್ಕಿತ್ತು. ಇದನ್ನೂ ಓದಿ: ಠಾಣೆಗೆ ನುಗ್ಗಿ, ದಾಂಧಲೆ – ಮೂವರು ನೈಜೀರಿಯನ್ನರನ್ನು ಬಿಡಿಸಿಕೊಂಡು ಹೋದ ನೂರಾರು ಜನದುಷ್ಕರ್ಮಿಗಳು ಬೊಲೆರೊ ವಾಹನದಲ್ಲಿ ಬಂದು ಗುಂಡಿನ ದಾಳಿ ನಡೆಸಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


