ಬೆಂಗಳೂರು: ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿದ್ದ ಕೆ.ಸತ್ಯನಾರಾಯಣ (K Sathyanarayana) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.ಹಿರಿಯ ಪತ್ರಕರ್ತರು, ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿದ್ದ ಕೆ.ಸತ್ಯನಾರಾಯಣರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಯಿತು. ಕನ್ನಡ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿ, ಹಲವಾರು ಜನರಿಗೆ ಪ್ರೇರಣೆಯಾಗಿದ್ದ ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.1/2 pic.twitter.com/7LJTLUAXYB— Basavaraj S Bommai (@BSBommai) January 8, 2023ಸತ್ಯನಾರಾಯಣ ಅವರು ತಾಯಿನಾಡು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿ ಕನ್ನಡಪ್ರಭ ಪತ್ರಿಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಸತ್ಯನಾರಾಯಣ ಅವರು ಇಳಿವಯಸ್ಸಿನಲ್ಲೂ ಬರೆಯುತ್ತಿದ್ದ ಅಂಕಣಗಳ ಮೂಲಕ ಸಮಕಾಲೀನ ರಾಜಕೀಯ, ವಾಣಿಜ್ಯ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದರು. ಮೌಲ್ಯಾಧಾರಿತ ಪತ್ರಿಕೋದ್ಯಮದ ಸಂಕೇತವಾಗಿದ್ದ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿ.ಎಸ್.ಆರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ ನಿಧನ ಕನ್ನಡ ಪತ್ರಿಕೋದ್ಯಮಕ್ಕೆ ದೊಡ್ಡ ನಷ್ಟವಾಗಿದ್ದು, ಹಳೆ ತಲೆಮಾರಿನ ಪತ್ರಿಕೋದ್ಯಮದ ಕೊಂಡಿಯೊಂದು ಕಳಚಿಕೊಂಡತಾಗಿದೆ. ಶ್ರೀಯುತರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನಪ್ರತಿಭೆ, ಬದ್ಧತೆ ಮತ್ತು ಕಸಬುಗಾರಿಕೆಗೆ ಹೆಸರಾದ ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರ ನಿಧನದಿಂದ ಬಹುಕಾಲದ ಆತ್ಮೀಯ ಸ್ನೇಹಿತರನ್ನು ಕಳೆದುಕೊಂಡಿದ್ದೇನೆ. ಸತ್ಯನಾರಾಯಣ ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ‌ ಕೋರುತ್ತೇನೆ. pic.twitter.com/s8wGsRbZNL— Siddaramaiah (@siddaramaiah) January 8, 2023ಪ್ರತಿಭೆ, ಬದ್ಧತೆ ಮತ್ತು ಕಸಬುಗಾರಿಕೆಗೆ ಹೆಸರಾದ ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರ ನಿಧನದಿಂದ ಬಹುಕಾಲದ ಆತ್ಮೀಯ ಸ್ನೇಹಿತರನ್ನು ಕಳೆದುಕೊಂಡಿದ್ದೇನೆ. ಸತ್ಯನಾರಾಯಣ ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ‌ ಕೋರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಕನ್ನಡದ ಹಿರಿಯ ಪತ್ರಕರ್ತ (Senior Journalist) ಕೆ. ಸತ್ಯನಾರಾಯಣ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇದನ್ನೂ ಓದಿ: 6ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


