ಬೆಂಗಳೂರು: ನವದೆಹಲಿಯಲ್ಲಿ (New Delhi) ನಡೆಯಲಿರುವ ಗಣರಾಜ್ಯೋತ್ಸವ (Republic Day) ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಿರುವುದಕ್ಕೆ ಸ್ತಬ್ದಚಿತ್ರ ನೋಡೆಲ್‌ ಅಧಿಕಾರಿ ಸಿ.ಆರ್‌.ನವೀನ್ ಸ್ಪಷ್ಟನೆ ನೀಡಿದ್ದಾರೆ.ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿಲ್ಲ ಎಂದು ತಿಳಿಸಿದ್ದಾರೆ.ಕಳೆದ ವರ್ಷದ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ರಾಜ್ಯಗಳ ಪಟ್ಟಿ ಹಾಗೂ ಈ ಬಾರಿ ಆಯ್ಕೆಯಾಗಿರುವ ರಾಜ್ಯಗಳ ಪಟ್ಟಿಯನ್ನು ಗಮನಿಸಿದರೆ, 2022ರಲ್ಲಿ ಮೊದಲ ಮೂರು ಬಹುಮಾನ ಪಡೆದ ರಾಜ್ಯಗಳು ಈ ಬಾರಿ ಆಯ್ಕೆಯಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಭಾಗವಹಿಸಿದ್ದ ರಾಜ್ಯಗಳಲ್ಲಿ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ, ಇನ್ನುಳಿದ ರಾಜ್ಯಗಳು ಆಯ್ಕೆಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ HDK ಆಕ್ರೋಶಈ ಬಾರಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಿಪಕ್ಷಗಳು ಟೀಕಾಪ್ರಹಾರ ನಡೆಸಿದ್ದವು. ಇದರ ಬೆನ್ನಲ್ಲೇ ಸ್ತಬ್ಧಚಿತ್ರ ನೋಡೆಲ್‌ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


