ಚಿತ್ರದುರ್ಗ: ಶೀಘ್ರವೇ ಸಚಿವ ಸಂಪುಟ (Cabinet) ವಿಸ್ತರಣೆಯಾಗಲಿದ್ದು, ಕೆ.ಎಸ್ ಈಶ್ವರಪ್ಪ (KS Eshwarappa) ಹಾಗೂ ರಮೇಶ್ ಜಾರಕಿಹೊಳಿಗೆ (Ramesh Jarkiholi) ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಶನಿವಾರ ಚಿತ್ರದುರ್ಗಕ್ಕೆ (Chitradurga) ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಲ್ಲಿನ ಸೀಬಾರ ಬಳಿಯ ಮೇದಾರ ಗುರುಪೀಠಕ್ಕೆ ಭೇಟಿ ನೀಡಿದರು. ನಂತರ ಮೇದಾರರ ಬುಡಕಟ್ಟು ಸಮಾವೇಶದಲ್ಲಿ ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಚಿವ, ಶಾಸಕರೊಂದಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಫೈಟರ್ ರವಿಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಕೇಂದ್ರ ನಾಯಕರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರದಲ್ಲಿ ತಲೆ ಹಿಡುಕನೊಬ್ಬ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡುವಷ್ಟು ಪ್ರಭಾವಿಯೇ?: ದಿನೇಶ್ ಗುಂಡೂರಾವ್ಈಗಾಗಲೇ ಕೇಂದ್ರ ನಾಯಕರ ಜೊತೆ ವಿಸ್ತೃತ ಚರ್ಚೆ ಮಾಡಿದ್ದೇವೆ. ಶೀಘ್ರವೇ ಮತ್ತೊಂದು ಸಭೆ ಮಾಡಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಇನ್ನೂ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಎಲ್ಲಾ ವಿಚಾರವನ್ನು ಕೇಂದ್ರದ ನಾಯಕರಿಗೆ ತಿಳಿಸಿದ್ದೇನೆ. ಜಿಲ್ಲಾವಾರು, ಪ್ರಾದೇಶಿಕ ಹಾಗೂ ಸಾಮಾಜಿಕವಾಗಿ ಎಲ್ಲವೂ ಚರ್ಚೆಯಲ್ಲಿದೆ ಎಂದು ಮಾಹಿತಿ ತಿಳಿಸಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


