ಬೆಂಗಳೂರು: ಬಿಎಂಟಿಸಿ (BMTC) ಬಸ್ (Bus) ಸಂಚಾರವನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ವಿಸ್ತರಣೆ ಮಾಡಿದ ಬೆನ್ನಲ್ಲೇ ಬಿಎಂಟಿಸಿ ಮತ್ತು ಕೆಎಸ್‍ಆರ್‌ಟಿಸಿ (KSRTC) ಮಧ್ಯೆ ಕೋಲ್ಡ್‌ವಾರ್‌ ಆರಂಭವಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಪಡೆದಿರೋ ಬಿಎಂಟಿಸಿ, ವ್ಯಾಪ್ತಿ ಹೊರತು ಸಂಚಾರಕ್ಕೆ ಮುಂದಾಗಿರುವ ಬಿಎಂಟಿಸಿ ನಡೆ ವಿರುದ್ಧ, ಕೆಎಸ್‍ಆರ್‌ಟಿಸಿ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಿಂದ (Bengaluru) ಚಿಕ್ಕಬಳ್ಳಾಪುರಕ್ಕೆ (Chickballapura) ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್‍ಆರ್‌ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶಚಿಕ್ಕಬಳ್ಳಾಪುರದಲ್ಲಿ ಬಿಎಂಟಿಸಿ ಸಂಚಾರ ಮಾಡಿದರೆ ಕೆಎಸ್‍ಆರ್‌ಟಿಸಿ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಸದ್ಯ ಈ ಎಲ್ಲಾ ವಿಚಾರ ಸಂಬಂಧ ತಕ್ಷಣ ಸರ್ಕಾರಕ್ಕೆ ಪತ್ರ ಬರೆಯಲು ಕೆಎಸ್‍ಆರ್‌ಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: BMTC ವೋಲ್ವೋ ಟಿಕೆಟ್ ದರ ಏರಿಕೆ
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


