ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) 10 ಲಕ್ಷ ಹಣ ಸಿಕ್ಕ ಪ್ರಕರಣದಲ್ಲಿ ಬಂಧಿತನಾಗಿದ್ದ ಮಂಡ್ಯ ಮೂಲದ ಪಿಡಬ್ಲ್ಯೂಡಿ  (PWD) ಕಿರಿಯ ಎಂಜಿನಿಯರ್ ಜಗದೀಶ್‌ಗೆ ಕೋರ್ಟ್ (Court) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ವಿಧಾನಸೌಧದ  ಮುಖ್ಯದ್ವಾರ ಬಳಿ 10.5 ಲಕ್ಷ ಹಣ ಸಿಕ್ಕ ಪ್ರಕರಣದಲ್ಲಿ ಜಗದೀಶ್‌ನನ್ನು ಬಂಧಿಸಿದ್ದ ವಿಧಾನಸೌಧ ಪೊಲೀಸರು (Vidhana Soudha Police) ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಇನ್‌ಸ್ಪೆಕ್ಟರ್ ಕುಮಾರಸ್ವಾಮಿ ಅವರು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದರು. ಆದರೂ ಜಗದೀಶ್ ಯಾರಿಗೆ ಹಣ ಕೊಡೋಕೆ ಬಂದಿದ್ದ ಅನ್ನೋ ಮಾಹಿತಿಯನ್ನ ಬಾಯಿಬಿಟ್ಟಿರಲಿಲ್ಲ. ಆದ್ದರಿಂದ ಲಂಚದ ರೂಪದಲ್ಲಿ ಹಣ ಕೊಡಲು ಬಂದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ತನಿಖೆ ಮುಂದುವರಿರಿಸಲಾಗಿತ್ತು. ಇದನ್ನೂ ಓದಿ: ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ – 10.50 ಲಕ್ಷ ಪೊಲೀಸರ ವಶಕ್ಕೆಜಗದೀಶ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಕೊನೆಯ ದೂರವಾಣಿ ಕರೆ ಹಾಗೂ ಕೆಲ ವಾಟ್ಸಪ್ ಚಾಟ್‌ಗಳನ್ನು ಡಿಲೀಟ್ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಜಗದೀಶ್ ಯಾರ ಕೈಕೆಳಗೆ ಕೆಲಸ ಮಾಡ್ತಿದ್ದ ಅನ್ನೋ ಕುರಿತಾಗಿ ಮಾಹಿತಿ ಸಂಗ್ರಹ ಮಾಡಿದ್ದರು. ಆರೋಪಿ ಬಾಯಿಬಿಡಲಿಲ್ಲ ಅಂದ್ರೆ ಸಿನೀಯರ್ ಎಂಜನಿಯರ್‌ಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಮುಂದಾಗಿದ್ದರು. ಇಂದು ಆರೋಪಿ ಜಗದೀಶ್‌ನನ್ನ ಕೋರ್ಟ್‌ಗೆ ಹಾಜರುಪಡಿಸಿದ್ದು, ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದ್ರೆ ನ್ಯಾಯಾಲಯ ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಇದನ್ನೂ ಓದಿ: ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್ – ದರ ಹೆಚ್ಚಳ
ಏನಿದು ಕೇಸ್? 
ವಿಧಾನಸೌಧದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 10.50 ಲಕ್ಷ ರೂ. ಅನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದ್ದರು. ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಒಬ್ಬ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಈ ವ್ಯಕ್ತಿಯಿಂದ ಬ್ಯಾಗ್‌ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿತ್ತು.ವ್ಯಕ್ತಿಯ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟ ಮಾಹಿತಿ ಆತ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನೂ ಬಂಧಿಸಿದ್ದರು.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


