ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.ಹೌದು. ದೇವಸ್ಥಾನಕ್ಕೆ ಬಂದು ಹೈಡ್ರಾಮಾ ಸೃಷ್ಟಿಸಿದ್ದ ಮಹಿಳೆಯನ್ನು ಹೇಮಾವತಿ ಎಂದು ಗುರುತಿಸಲಾಗಿದೆ. ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ (Venkateshwara) ನನ್ನ ಪತಿ. ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರಬೇಕು ಎಂದು ಮಹಿಳೆ ಹಠಕ್ಕೆ ಬಿದ್ದಿದ್ದಾಳೆ. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ ಈ ವೇಳೆ ಅರ್ಚಕ ರಾಜಾಜಂ, ಮಹಿಳೆಗೆ ತಿಳಿ ಹೇಳಿದರು. ಆದರೂ ಕೇಳದೇ ಗರ್ಭಗುಡಿಯ ಒಳಗೆ ಹೋಗಲು ಯತ್ನಿಸಿದ್ದಾಳೆ. ಈ ವೇಳೆ ದೇವಸ್ಥಾನದ ಧರ್ಮದರ್ಶಿ ಮುನಿ ಕೃಷ್ಣರಿಗೆ ಫೋನ್ ಮಾಲಾಯಿತು. ಕೂಡಲೇ ಸ್ಥಳಕ್ಕೆ ಬಂದ ಧರ್ಮದರ್ಶಿ ಮುನಿಕೃಷ್ಣ ಅವರನ್ನು ಅವಾಚ್ಯವಾಗಿ ನಿಂದಿಸಿ ಮುಖಕ್ಕೆ ಉಗಿದಿದ್ದಳು. ಇದರಿಂದ ಕೋಪಗೊಂಡ ಮುನಿಕೃಷ್ಣ, ಮಹಿಳೆಯನ್ನು ಎಳೆದು ಹೊರಹಾಕಿದ್ರು.ಹೀಗಂತ ಪೊಲೀಸರ ತನಿಖೆಯಲ್ಲಿ ಮಹಿಳೆಯ ಮೇಲಿನ ಹಲ್ಲೆ ಹಿಂದಿನ ಆಸಲಿ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಮುನಿಕೃಷ್ಣರನ್ನು ಪೊಲೀಸರು ಬಂಧಿಸಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


