ಚಿಕ್ಕಬಳ್ಳಾಪುರ: ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಳಿ ಟಿಪ್ಪರ್ ಲಾರಿ 7 ಕಾರುಗಳಿಗೆ (Cars) ಡಿಕ್ಕಿ ಹೊಡೆದಿದ್ದು ಸರಣಿ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಬಿಎಂಡಬ್ಲ್ಯೂ, ಸ್ಯಾಂಟ್ರೋ, ಎಟಿಯೋಸ್ ಲಿವಾ, ಸ್ವಿಫ್ಟ್, ಇಂಡಿಕಾ, ಥಾರ್ ಕಾರುಗಳಿಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದಿದೆ. ಬೆಂಗಳೂರು ಕಡೆಯಿಂದ ದೇವನಹಳ್ಳಿ ಕಡೆಗೆ ಬರ್ತಿದ್ದ ಟಿಪ್ಪರ್ ಲಾರಿ ಸಿಗ್ನಲ್‍ನಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಒಂದಕ್ಕೊಂದು ಕಾರುಗಳು ಪರಸ್ಪರ ಹಿಂಬದಿಯಿಂದ ಡಿಕ್ಕಿಯಾಗಿ 7 ಕಾರುಗಳ ಮುಂಭಾಗ ಹಿಂಭಾಗ ಜಖಂಗೊಂಡಿವೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯದೇವನಹಳ್ಳಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಒಂದು ಕಿಲೋಮೀಟರ್‌ಗೂ ಹೆಚ್ಚು ದೂರ ಹೆದ್ದಾರಿಯಲ್ಲಿ ವಾಹನಗಳು ಸಿಲುಕಿ ಹಾಕಿಕೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಇದನ್ನೂ ಓದಿ: ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ!
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


