ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಪಲ್ಟಿ ಹೊಡೆದು (Bus Overturn) ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


